'ಮಕ್ಕಳ ಅಭಿವೃದ್ಧಿಗೆ ಸಾಂಸ್ಕೃತಿಕ ಚಟುವಟಿಕೆ ಪೂರಕ'
ಜಾವಗಲ್: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಓದಿನೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳು ಪೂರಕವೆಂದು ತಾಲೂಕು ಪಂಚಾಯ್ತಿ ಸದಸ್ಯೆ ಲಕ್ಷ್ಮೀ ರವಿಶಂಕರ್ ತಿಳಿಸಿದರು.
ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳಮನೆ - ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾಭ್ಯಾಸದಲ್ಲಿ ಪೋಷಕರ ಮತ್ತು ಶಿಕ್ಷಕರ ಕಾಳಜಿ ಅತ್ಯವಶ್ಯಕ. ಶಾಲಾ ವಾರ್ಷಿಕೋತ್ಸವವು ಶಾಲೆಯ ಪ್ರಗತಿಯ ಚಿತ್ರಣವಾಗಿರುತ್ತದೆ ಎಂದರು.
ಮುಖ್ಯ ಶಿಕ್ಷಕ ಶಿವಲಿಂಗಮೂರ್ತಿ ಮಾತನಾಡಿ, ಶಾಲೆ 100 ವರ್ಷಗಳ ಇತಿಹಾಸ ಹೊಂದಿದ್ದು ಉತ್ತಮ ಶಾಲೆಗಳಲ್ಲಿ ಒಂದಾಗಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ 8ನೇ ತರಗತಿ ಪ್ರಾರಂಭವಾಗುತ್ತಿದೆ. ಆದಷ್ಟು ಬೇಗನೆ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆ.ಆರ್.ವಸಂತಕುಮಾರ್ ಮಾತನಾಡಿ, ಮಕ್ಕಳ ಮನೆ ಯೋಜನೆ ಯಶಸ್ವಿಯಾಗಿದ್ದು ಎಲ್.ಕೆ.ಜಿ. ಮತ್ತು ಯುಕೆಜಿಯ ಮಕ್ಕಳಲ್ಲಿ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಕಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಪೋಷಕರು ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ತಮ್ಮ ಮಕ್ಕಳನ್ನು ಸೇರಿಸ ಬೇಕೆಂದು ಮನವಿ ಮಾಡಿದರು.
ಸಿಆರ್ಪಿ ವಿಷ್ಣುವರ್ಧನ್, ಶಿಕ್ಷಕ ದಾನೇಗೌಡ, ಸುರೇಶ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳ ಮನೆ ಪೋಷಕರ ಸಮಿತಿ ಅಧ್ಯಕ್ಷ ಶ್ರೀನಿವಾಸ ಉಪಾಧ್ಯಕ್ಷ ರಾಮಸ್ವಾಮಿ ಯೋಗ ಶಿಕ್ಷಕ ರಂಗಸ್ವಾಮಿ, ಹೆಚ್ಚುವರಿ ಮುಖ್ಯ ಶಿಕ್ಷಕ ಶಿವಣ್ಣ, ಬಂದೂರು ಶಾಲೆಯ ಮುಖ್ಯ ಶಿಕ್ಷಕ ಸೋಮಶೇಖರ್ ವೇದಿಕೆಯಲ್ಲಿದ್ದರು.
ನೃತ್ಯ ಶಿಕ್ಷಕಿ ಗೀತಾರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು. ಮಕ್ಕಳ ಮನೆ ಪುಟಾಣಿಗಳ ನೃತ್ಯ ಪ್ರೇಕ್ಷಕರನ್ನು ರಂಜಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

