ಹಾಸನ

'ಮಹಿಳೆಯರ ಸಬಲೀಕರಣಕ್ಕೆ ಹಲವು ಅಭಿವೃದ್ಧಿ ಯೋಜನೆ'

Published On :

ಜಾವಗಲ್: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ರುದ್ರೇಶಗೌಡ ತಿಳಿಸಿದರು. ಇಲ್ಲಿನ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಜಾವಗಲ್
ಹೋಬಳಿಯ ಗ್ರಾಮ ಪಂಚಾಯಿತಿ ಮಟ್ಟದ ಕಾಂಗ್ರೆಸ್ ಮಹಿಳಾ ಸಮಿತಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸೋನಿಯಾಗಾಂಧಿ ನೇತೃತ್ವದ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳಂತೆ ಶಾಸನ ಸಭೆ ಮತ್ತು ಸಂಸತ್‌ಗಳಲ್ಲೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಬದ್ಧವಾಗಿದೆ ಎಂದು ಹೇಳಿದರು.  
ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, ಮಹಿಳೆಯರು ಸಾಕಷ್ಟು ಕ್ಷೇತ್ರಗಳಲ್ಲಿ ಮುಂದೆ ಬಂದಿದ್ದಾರೆ. ಪಕ್ಷದ ಮಾರ್ಗದರ್ಶನದಲ್ಲಿ ಪ್ರತಿ ಪಂಚಾಯಿತಿ ಮಟ್ಟದಲ್ಲೂ ಸಮಿತಿಗಳು ಸಕ್ರಿಯವಾಗಿ ಸಂಘಟನೆಗೆ ಶ್ರಮಿಸ ಬೇಕು ಎಂದು ತಿಳಿಸಿದರು.
ಹಳೇಬೀಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ನಾಗರಾಜು, ಪಂಚಾಯ್ತಿ ಮಟ್ಟದ ಮಹಿಳಾ ಪ್ರತಿನಿಧಿಗಳ ಪಟ್ಟಿ ಬಿಡುಗಡೆಮಾಡಿ ಮಾತನಾಡಿ ಮಹಿಳೆಯರ ಸಂಘಟನೆಗೆ ಹೆಚ್ಚುಒತ್ತು ನೀಡ ಬೇಕು ಎಂದು ಹೇಳಿದರು.
ಹಳೇಬೀಡು ಮಹಿಳಾ ಘಟಕ ಅಧ್ಯಕ್ಷೆ ಅಕ್ಕಮ್ಮ, ಎಪಿಎಂಸಿ ಮಾಜಿ ಅಧ್ಯಕ್ಷ ಆನಂದಮೂರ್ತಿ ಚಿಕ್ಕಯ್ಯ ಮಾತನಾಡಿದರು. ಜಿಪಂ ಮಾಜಿ ಸದಸ್ಯೆ  ಭಾಗ್ಯರಾಜೇಗೌಡ, ಬಂದೂರು ಗ್ರಾಪಂ ಉಪಾಧ್ಯಕ್ಷೆ ತಿಮ್ಮಮ್ಮ, ಹಿರಿಯ ಕಾರ್ಯಕರ್ತೆ  ರಾಜಮ್ಮ, ನಾಗರತ್ನಮ್ಮ ಅವರನ್ನು  ಸನ್ಮಾನಿಸಲಾಯಿತು.
ತಾಪಂ ಸದಸ್ಯೆ ಹಾಗು ಬೇಲೂರು ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀರವಿಶಂಕರ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಯಶೋಧರ ಕುಮಾರ್, ಹಳೇಬೀಡು ಬ್ಲಾಕ್ ಕಾಂಗ್ರೆಸ್ ಎಸ್ಸಿ ಮತ್ತು ಎಸ್ಟಿ ಘಟಕ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ರಾಜಶೇಖರ್, ತಾಪಂ ಮಾಜಿ ಸದಸ್ಯ ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.