ಚುನಾವಣಾ ನೀತಿ ಸಂಹಿತೆ ಸಭೆ
ಚನ್ನರಾಯಪಟ್ಟಣ: ಚುನಾವಣಾ ನೀತಿ ಸಂಹಿತೆ ಸಭೆ ಇಲ್ಲಿನ ತಾಲೂಕು ಕಚೇರಿಯಲ್ಲಿ ನಡೆಯಿತು.
ತಹಸಿಲ್ದಾರ್ ನಟರಾಜ್ ಅಧ್ಯಕ್ಷತೆಯಲ್ಲಿ ವಾರ್ಡ್ ಚುನಾವಣಾಧಿಕಾರಿಗಳ ಸಭೆ ನಡೆದು ಶಾಂತಿ, ಶಿಸ್ತು ಹಾಗೂ ಮುಕ್ತವಾಗಿ ಚುನಾವಣೆ ನಡೆಸಲು ಸೂಚಿಸಿದರು. ಜಿಲ್ಲಾಧಿಕಾರಿಗಳು ಮೂವರು ಅಧಿಕಾರಿಗಳನ್ನು ನೇಮಿಸಿದ್ದು, 23 ವಾರ್ಡ್ಗಳ ನಾಮಪತ್ರ ಸಲ್ಲಿಕೆ ಕಾರ್ಯ ಹಾಗೂ ಪರಿಶೀಲನೆ ಈಗಾಗಲೇ ನಡೆದಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಚುನಾವಣಾ ಅಭ್ಯರ್ಥಿಗಳ ಸಭೆ ಫೆ.28ರಂದು ತಾಲೂಕು ಕಚೇರಿಯಲ್ಲಿ ಬೆಳಗ್ಗೆ 11ಘಂಟೆಗೆ ನಡೆಯಲಿದೆ ಎಂದು ಹೇಳಿದರು. ಅಭ್ಯರ್ಥಿಗಳಿಗೆ ಲೆಕ್ಕಪತ್ರ ನೀಡಿಕೆಯ ಬಗ್ಗೆ ಸೂಚನೆ ನೀಡಲಾಗುವುದು. ಇದಕ್ಕಾಗಿ ಲೆಕ್ಕಪತ್ರ ಅಧಿಕಾರಿ ನೇಮಕವಾಗಲಿದ್ದಾರೆ, ಅಭ್ಯರ್ಥಿಗಳು ಲೆಕ್ಕ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅಧಿಕಾರಿಗಳು ಗಮನಿಸಿ ಲೆಕ್ಕ ಹಾಕುತ್ತಾರೆ. ಮಾ. 2 ಮತಗಟ್ಟೆ ಅಧಿಕಾರಿಗಳ ಸಭೆಯ ತರಬೇತಿ ನಡೆಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

