ಮತದಾರರ ಪಟ್ಟಿಯಲ್ಲಿ ಲೋಪದೋಷ: ಶಿರಸ್ತೇದಾರ್ಗೆ ತರಾಟೆ
ಬೇಲೂರು: ಇಲ್ಲಿನ ಪುರಸಭೆಗೆ ಮಾರ್ಚ್ 7ರಂದು ನಡೆಯುವ ಚುನಾವಣೆಗೆ ತಯಾರಿಸಿರುವ ಮತದಾರರ ಪಟ್ಟಿಯಲ್ಲಿ ಭಾರಿ ಲೋಪದೋಷ ಕಂಡು ಬಂದಿದೆ. ಅವಧಿ ಮುಗಿದ ನಂತರವೂ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳನ್ನು ಸೇರ್ಪಡೆ ಮಾಡುತ್ತಿರುವುದು ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತಂಕ ಮೂಡಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಮಂಗಳವಾರ ಚುನಾವಣಾ ಕಚೇರಿಗೆ ಭೇಟಿ ನೀಡಿದ ಕೆಲ ಅಭ್ಯರ್ಥಿಗಳು, ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಲ್ಲಿ ಹೊಸ ಸೇರ್ಪಡೆ ಮತ್ತು ಬದಲಾವಣೆ ಮಾಡದಂತೆ ಅಗ್ರಹಿಸಿದರು.
ಪಟ್ಟಣದ 6ನೇ ವಾರ್ಡ್ನಲ್ಲಿ 85, 8ನೇ ವಾರ್ಡ್ನಲ್ಲಿ 38, 9ನೇ ವಾರ್ಡ್ 50 ಮತ್ತು 18 ನೇ ವಾರ್ಡ್ನಲ್ಲಿ 50ಕ್ಕೂ ಹೆಚ್ಚು ಜನರ ಹೆಸರನ್ನು ಆಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಸುವ ಹುನ್ನಾರ ನಡೆದಿದೆ. ಪಟ್ಟಣದಲ್ಲಿ ವಾಸವಿಲ್ಲದಿದ್ದರೂ ಪುರಸಭೆಯಿಂದ ಪ್ರಭಾವ ಬಳಸಿ ಆಕ್ರಮವಾಗಿ ವಾಸಸ್ಥಳ ದೃಢೀಕರಣ ಪತ್ರ ಪಡೆದು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮತ್ತು ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ.
ಕೆಲವರು ಆಭ್ಯರ್ಥಿಗಳೊಂದಿಗೆ ಶಾಮೀಲಾಗಿ ಸುಳ್ಳು ವರದಿ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಈ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬಾರದು ಎಂದು ಅಭ್ಯರ್ಥಿಗಳಾದ ಎಸ್.ಕೆ.ನಾಗೇಶ್, ಜುಬೇರ್ ಅಹಮದ್, ಪೈಂಟರ್ ರವಿ, ಎಂ.ಗುರುಪಾದಸ್ವಾಮಿ, ಎನ್.ಯೋಗೇಶ್ ಒತ್ತಾಯಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಫೆ. 23ರಂದು ಕಡೆಯ ದಿನಾಂಕವಾಗಿದ್ದು 8ನೇ ವಾರ್ಡ್ ಮತದಾರರ ಪಟ್ಟಿಯ ಪರಿಶೀಲನೆಗೆ ತೆರಳಿದ ಆಶೋಕ್ ಮಠಪತಿ ಫೆ. 25ರ ದಿನಾಂಕವಿದ್ದ 44 ಅರ್ಜಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡಿದ್ದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಯಿತು.ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿದ್ದ ಚುನಾವಣೆ ಶಿರೇಸ್ತೇದಾರ್ ಶಿವಯ್ಯ ಆಶೋಕ್ ಮಠಪತಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರಲ್ಲದೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು. ಚುನಾವಣೆ ಶಿರೇಸ್ತೇದಾರ್ ಶಿವಯ್ಯ ಮಾತನಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಫೆ. 23ರಂದು ಕಡೆಯ ದಿನ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

