ಮಾಧ್ಯಮ- ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿ: ನ್ಯಾ. ನಾಗರಾಜ್
ಬೇಲೂರು: ಮಾಧ್ಯಮಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದಾಗ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆ ನಿಲ್ಲಲು ಸಾಧ್ಯ ಎಂದು ಹಿರಿಯ ವ್ಯವಹಾರಿಕ ನ್ಯಾಯಾಧೀಶ ಕೆ.ಆರ್.ನಾಗರಾಜ್ ಅಭಿಪ್ರಾಯಪಟ್ಟರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಬೇಲೂರು ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಜೊತೆ ಕಾನೂನು ವಿಷಯ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಶ್ನೋತ್ತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಸಂದರ್ಭದಲ್ಲಿ ಪತ್ರಿಕೆಗಳು ಸಮಾಜಕ್ಕೆ ಅವಶ್ಯಕವಾಗಿರುವ ವರದಿ ಮಾಡದೆ ಬೇಡದ ವಿಷಯಗಳನ್ನು ಪ್ರಚಾರ ಪಡಿಸುತ್ತಿರುವುದು ಸಾಮಾಜಿಕವಾಗಿ ಹಿತಕರವಲ್ಲ. ಪತ್ರಿಕೆಗಳು ಭಾಷೆಗೆ ಪ್ರಾಮುಖ್ಯತೆ ನೀಡುತ್ತಿಲ್ಲ, ಮಾಧ್ಯಮಗಳು ಇದರಿಂದ ಘನತೆ ಕಳೆದುಕೊಳ್ಳುವಂತಾಗಿದೆ ಕಳವಳ ವ್ಯಕ್ತಪಡಿಸಿದರು.
ಸಮಾಜದಲ್ಲಿ ಪತ್ರಿಕಾ ಮಾಧ್ಯಮ 4ನೇ ಅಂಗ ಎಂದು ಕರೆಯಲಾಗುತ್ತಿದೆ. ಅದರೆ ಪತ್ರಿಕಾ ಧರ್ಮ ಹಾಗೂ ಪತ್ರಕರ್ತರ ಜವಾಬ್ದಾರಿ ಬಹಳ ಸೂಕ್ಷ್ಮವಾಗಿದ್ದು ಪರಿಣಾಮಕಾರಿ ವರದಿ ನೀಡಿದಾಗ ಉತ್ತಮ ನಾಗರಿಕ ಸಮಾಜ ನಿರ್ಮಾಣ ಮಾಡಲು ಸಾಧ್ಯಎಂದರು.
ಕಿರಿಯ ವ್ಯವಹಾರಿಕ ನ್ಯಾಯಾಧೀಶ ವಿ. ಪ್ರಕಾಶ್ ವಕೀಲರ ಸಂಘದ ಕಾರ್ಯದರ್ಶಿ ಬಿ.ವಿ.ರವಿ, ವಕೀಲರಾಜೇಗೌಡ, ನಟರಾಜ್, ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

