ಹಾಸನ

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸಚಿವ ಲಿಂಬಾವಳಿ ಪ್ರಚಾರ

Published On :

ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. 35 ವಾರ್ಡ್‌ಗಳನ್ನು ಹೊಂದಿರುವ ನಗರಸಭೆ ಚುನಾವಣೆಯು ಮಾ.7ರಂದು ನಡೆಯಲಿದ್ದು, ಈಗಾಗಲೇ ಕಣದಲ್ಲಿ ಇರುವ ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಬೆಂಬಲಿಗರು ಮತ್ತು ಅಭಿಮಾನಿಗಳು ನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ: ಗುರುವಾರ ನಗರದ ಹೇಮಾವತಿ ಪ್ರತಿಮೆ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
 ಹೇಮಾವತಿ ಪ್ರತಿಮೆಯಿಂದ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಪಕ್ಷದ ಅಭ್ಯರ್ಥಿಗಳು, ಕಾರ್ಯಕರ್ತರು, ಅಭಿಮಾನಿಗಳು ಬೈಕ್ ರ್ಯಾಲಿ ಪ್ರಾರಂಭಿಸಿ, ಹೊಸಲೈನ್ ರಸ್ತೆ, ಹಳೇ ಮಟನ್ ಮಾರ್ಕೆಟ್, ಸಾಲಗಾಮೆ ರಸ್ತೆ, ಆರ್.ಸಿ.ರಸ್ತೆ ಸೇರಿದಂತೆ ನಗರದ ನಾನಾ ಬೀದಿಗಳಲ್ಲಿ ಬೈಕ್ ರ್ಯಾಲಿ ಕೈಗೊಂಡು ಚುನಾವಣಾ ಪ್ರಚಾರ ನಡೆಸಿದರು. ನಂತರ ಹೈಸ್ಕೂಲ್ ಮೈದಾನದಲ್ಲಿ ರ್ಯಾಲಿ ಅಂತ್ಯಗೊಳಿಸಿದರು.
 ನಂತರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗಿದೆ. ಬಿಜೆಪಿ ಸರ್ಕಾರ ಕಳೆದ ನಾಲ್ಕುಮುಕ್ಕಾಲು ವರ್ಷದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸವನ್ನು ಮಾಡಿದೆ. ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಲಿಸುವಂತೆ ಮನವಿ ಮಾಡಿದರು.
 ಚನ್ನರಾಯಪಟ್ಟಣದಲ್ಲಿ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು, ನಮ್ಮ ಅವಧಿಯಲ್ಲಿ ಜಿಲ್ಲೆಗೆ ಯಾವುದೇ ರೀತಿಯ ತಾರತಮ್ಯ ಮಾಡದೇ ಸಮರ್ಪಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನವನ್ನು ನೀಡಿದ್ದೇವೆ. ಮುಂದಿನ ದಿವಸಗಳಲ್ಲಿ ಬಿಜೆಪಿ ಸರ್ಕಾರವು ಇನ್ನು ಹೆಚ್ಚಿನ ಕೆಲಸ ಮಾಡಲು ಮತದಾರರು ಅನುವು ಮಾಡಿಕೊಡಬೇಕು. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡಬೇಕು ಎಂದು ಕೋರಿದರು.
 ಜಿಲ್ಲಾಧ್ಯಕ್ಷ ಎಂ.ಎಸ್.ಕೃಷ್ಣೇಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನವೀಲೆ ಅಣ್ಣಪ್ಪ, ಮುಖಂಡ ಕಮಲಕುಮಾರ್, ಲೋಹಿತ್‌ಗೌಡ, ಪ್ರಸನ್ನ ಕುಮಾರ್, ತಂಬ್ಲಾಪುರ ಕೃಷ್ಣೇಗೌಡ, ಮನೋಹರ್, ಪುನಿತ್, ಚಂದ್ರು, ಮಂಜುನಾಥ್, ಪ್ರವೀಣಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.