ಶಿಕ್ಷಕರಿಂದ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ
ಮಧುಗಿರಿ: ಪಟ್ಟಣದ ಜ್ಞಾನ ಭಾರತಿ ಎಸ್.ಎನ್.ಪ್ರೌಢಶಾಲೆ ಮಾನ್ಯತೆ ನವೀಕರಿಸಿ ಶಿಕ್ಷಕರಿಗೆ ಕೊಡಬೇಕಾದ ವೇತನ ಬಿಡುಗಡೆ ಮಾಡದೇ ಶಿಕ್ಷಣ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿ ಶಾಲೆಯ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಇಲ್ಲಿನ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಶಾಲೆ ಅನುದಾನಕ್ಕೆ ಒಳಪಟ್ಟಿದ್ದು ಒಟ್ಟು 7, ಮಂದಿ ಬೋಧಕರು, 3 ಮಂದಿ ಬೋಧಕೇತರ ವರ್ಗ ಕಾರ್ಯ ನಿರ್ವಹಿಸುತ್ತಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಆಡಳಿತ ಮಂಡಳಿ ಪ್ರಾರಂಬಿಸಿರುವ ಈ ಶಾಲೆ ವೇತನಾನುದಾನಕ್ಕೆ ಒಳಗೊಂಡಿದೆ.
2008-09 ರಿಂದ 2012-13ನೇ ಅವಧಿಗೆ ಶಾಲೆಯ ಮಾನ್ಯತೆ ನವೀಕರೀಸಲು 2008ರಲ್ಲೇ ಪ್ರಸ್ತಾವನೆ ಸಲ್ಲಿಸಿದ್ದರೂ ಕೂಡ ಶಿಕ್ಷಣ ಇಲಾಖೆ ಅಧಿಕಾರಿಗಳು ಇಲ್ಲಿವರೆಗೂ ಆಕ್ಷೇಪಣೆ ಹಾಕುತ್ತಾ ಮಾನ್ಯತೆ ನವೀಕರಿಸದೇ ಈಗ 3 ತಿಂಗಳಿಂದ ವೇತನ ನಿಲ್ಲಿಸಿ ಸಂಕಷ್ಟದಲ್ಲಿರುವ ಶಿಕ್ಷಕರ ಜತೆ ಚಲ್ಲಾಟವಾಡುತ್ತಿದ್ದಾರೆ ಎಂದು ಪ್ರಭಾರ ಮುಖ್ಯ ಶಿಕ್ಷಕ ರಾಜಪ್ಪ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಹಿಂದೆ ಕೂಡ ವೇತನ ನಿಲ್ಲಿಸಿ ಹೋರಾಟದ ಮೂಲಕವೇ ವೇತನ ಪಡೆದಿದ್ದೇವೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು 3 ತಿಂಗಳಿಂದ ಸಂಸ್ಥೆಯ ಮಾನ್ಯತೆ ನವೀಕರಿಸದೇ ವೇತನ ನಿಲ್ಲಿಸಿರುವ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಕಷ್ಟಕರವಾಗಿದೆ ಆದ್ದರಿಂದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಧರಣಿ ನಡೆಸಿದರು.
ವಿದ್ಯಾರ್ಥಿಗಳ, ಶಿಕ್ಷಕರ ಹಿತ ದೃಷ್ಟಿಯಿಂದ ಮಾನ್ಯತೆ ಬಗ್ಗೆ ಮರು ಪರಿಶೀಲಿಸಿ ಮಾನ್ಯತೆ ನೀಡಿ ವೇತನ ನೀಡಬೇಕು. ಈಗಾಗಲೇ ಶಿಕ್ಷಕರು, ಸಿಬ್ಬಂದಿ ವರ್ಗ ಸಂಕಷ್ಟಕ್ಕೆ ಸಿಲುಕಿ ಕುಟುಂಬದ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಆದ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಕೊಂಡು ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಹೋರಾಟಕ್ಕೆ ಶಿಕ್ಷಕ ಸಂಘಟನೆಗಳು ಬೆಂಬಲ ಸೂಚಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

