ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು: ಈಶ್ವರಪ್ಪ
ಗುಬ್ಬಿ: ಪ್ರತಿ ಪಟ್ಟಣಕ್ಕೊಂದು ಘನ ತ್ಯಾಜ್ಯ ನಿರ್ವಹಣ ಘಟಕ ಸ್ಥಾಪನೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ರಸ್ತೆಗಳ ನಿರ್ಮಾಣ, ಚರಂಡಿ ವ್ಯವಸ್ಥೆ ಇನ್ನು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡಿರುವ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಧೆಗಳ ಚುನಾವಣೆಯಲ್ಲಿಅಭೂತಪೂರ್ವ ಯಶಸ್ಸು ಕಾಣಲಿದೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಹಲವು ವಾರ್ಡ್ಗಳಲ್ಲಿ ಇಂದು ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು ಗುಬ್ಬಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಕ್ಕಾಗಿ 5 ಕೋಟಿ, ರಸ್ತೆಗಳ ಕಾಮಗಾರಿಗೆ 10 ಕೋಟಿ, ಒಳಚರಂಡಿ ವ್ಯವಸ್ಥೆಗಾಗಿ 22 ಕೋಟಿ ಹಣವನ್ನು ನೀಡಲಾಗಿದೆ ಎಂದು ತಿಳಿಸಿದರು. ಸಣ್ಣ ಪಟ್ಟಣ ಮತ್ತು ನಗರ ಪ್ರದೇಶಗಳ ಅಭಿವೃದ್ಧಿಗೆ 700 ಕೋಟಿ ರು.ಗಳಿಗೂ ಅಧಿಕ ಹಣವನ್ನು ವಿನಿಯೋಗಿಸಿದ ಹೆಗ್ಗಳಿಕೆ ಪಡೆದ ಬಿಜೆಪಿ ಸರ್ಕಾರ ಈ ಬಾರಿಯ ಸ್ಥಳೀಯ ಚುನಾವಣೆಯಲ್ಲಿ ವಿಶೇಷ ಪ್ರಣಾಳಿಕೆ ಹೊರತಂದಿದೆ ಎಂದರು. ಈ ಬಾರಿ ಸ್ಥಳೀಯ ಚುನಾವಣೆಯ ಫಲಿತಾಂಶದಲ್ಲಿ ಶೇ. 60 ರಷ್ಟು ಬಿಜೆಪಿ ತನ್ನ ಮಡಿಲಿಗೆ ಹಾಕಿಕೊಳ್ಳಲಿದೆ ಎಂದರು.
ಯಡಿಯೂರಪ್ಪ ಅವರ ನಿರ್ಗಮನ ವ್ಯಕ್ತಿಗತವಾಗಿದೆ. ಅವರೊಂದಿಗೆ ಯಾವ ಬಿಜೆಪಿ ಪ್ರಭಾವಿ ಮುಖಂಡರು ಹೊರ ಹೋಗಿಲ್ಲ, ಓರ್ವ ವ್ಯಕ್ತಿಯಿಂದ ಬಿಜೆಪಿಗೆ ಯಾವುದೇ ಧಕ್ಕೆ ಇಲ್ಲ ಎಂದರು. ಪಟ್ಟಣ ಬಿ.ಹೆಚ್.ರಸ್ತೆಯ ಚರ್ಚ್ ಮಂಭಾಗದಲ್ಲಿ ಅಲಂಕೃತಗೊಂಡ ವಾಹನ ಏರಿದ ಕೆ.ಎಸ್.ಈಶ್ವರಪ್ಪ ಅವರು ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಯ ಪರವಾಗಿ ಸ್ವರ್ಧಿಸಿರುವ ಅಭ್ಯರ್ಥಿಗಳ ಹಾಗೂ ಕಾರ್ಯಕರ್ತರ ಜೊತೆಗೂಡಿ ನಗರದ ಹಲವು ವಾರ್ಡ್ಗಳಲ್ಲಿ ರೋಡ್ ಶೋ ನಡೆಸಿದರು. ಬೆಂಬಲ ನೀಡುವಂತೆ ಮನವಿ ಮಾಡಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಬಿ. ನಂದೀಶ್, ಜಿಲ್ಲಾಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಎಚ್.ಟಿ. ಭೈರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಸಿದ್ದರಾಮಯ್ಯ, ತಾಲೂಕು ಅಧ್ಯಕ್ಷ ಎಸ್. ವಿಜಯಕುಮಾರ್ ಹಾಗೂ ಮುಖಂಡರಾದ ನಂಜೇಗೌಡ, ಎನ್.ಸಿ.ಪ್ರಕಾಶ್, ಲೋಕೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

