ಸಂಘ ಸಂಸ್ಥೆಗಳ ಸೌಲಭ್ಯ ಸದುಪಯೋಗಕ್ಕೆ ಕರೆ

Updated on: 

ಅರಸೀಕೆರೆ: ಸರ್ಕಾರ ಗುಣಮಟ್ಟದ ಶಿಕ್ಷಣಕ್ಕಾಗಿ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಅದರೊಂದಿಗೆ ಸಂಘ ಸಂಸ್ಥೆಗಳು ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಕಲಿತ ಶಾಲೆಗೆ ಹೆತ್ತ ತಂದೆತಾಯಿಗಳಿಗೆ ಕೀರ್ತಿ ತರಬೇಕೆಂದು ರೋಟರಿ ಅಧ್ಯಕ್ಷ ಯೋಗೀಶಾಚಾರ್ ಕರೆ ನೀಡಿದರು.
 ತಾಲೂಕಿನ ಬಾಣಾವರ ಹೋಬಳಿ, ಭೈರಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗಾಗಿ ಸರ್ಕಾರಿ ಹಾಗೂ ಸಂಘಸಂಸ್ಥೆಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದು ಸರ್ಕಾರಿ ಶಾಲೆಗಳಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರು ಪೋಷಕರ ಆಂಗ್ಲ ಭಾಷಾ ವ್ಯಾಮೋಹದಿಂದ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿರುವುದು ಸರಿಯಲ್ಲ. ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರುವ ಪ್ರಯತ್ನ ಮಾಡಬೇಕೆಂದರು. ಇದೇ ವೇಳೆ ಶಾಲೆಯ 50 ಮಕ್ಕಳಿಗೆ  ರೋಟರಿ ನೇತ್ರಾಲಯದಿಂದ ಉಚಿತ ನೇತ್ರ ತಪಾಸಣೆ ನಡೆಸಲಾಯಿತು. ಕೆಜೆಪಿ ಮುಖಂಡ ಬಿ.ಎನ್.ಬಸವರಾಜು,  ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಸಹಶಿಕ್ಷಕ  ಪಶುಪತಿರಾವ್ ಇತರರು ಇದ್ದರು.                                                                   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com