ಹೊಳೆನರಸೀಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಜ.24ರಂದು ಜಿಲ್ಲಾ ಮಟ್ಟದ ಮೀನಾ ಮೇಳ ಹಾಗೂ ತಾಲೂಕು ಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಪಟ್ಟಣದ ಅರಕಲಗೂಡು ರಸ್ತೆಯಲ್ಲಿನ ಶಿಕ್ಷಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ತಿಳಿಸಿದ್ದಾರೆ.
ಇಂದು ಚುಟುಕು
ವಾಚನ ಸ್ಪರ್ಧೆ
ಹೊಳೆನರಸೀಪುರ: ಚುಟುಕು ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ವತಿಯಿಂದ ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ಸಭಾಂಗಣದಲ್ಲಿ ಜ.24ರಂದು ಶಾಲೆಗೊಂದು ಚುಟುಕು ವಾಚನ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಪದಾಧಿಕಾರಿಗಳು ತಿಳಿಸಿದ್ದಾರೆ. ಆದರ್ಶ ವಿದ್ಯಾಶಾಲೆಯ ಪ್ರಾಂಶುಪಾಲ ಎಸ್.ಆರ್.ಲೋಕೇಶ್ ಉದ್ಘಾಟಿಸುವರು. ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎ.ಆರ್.ರವಿಕುಮಾರ್ ಅವರು ಭಾಗವಹಿಸಲಿದ್ದು, ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರೇಮ ಮಂಜುನಾಥ್ ಅಧ್ಯಕ್ಷತೆ ವಹಿಸುವರು ಎಂದು ಪರಿಷತ್ತಿನ ಕಾರ್ಯದರ್ಶಿ ಕುಮಾರ್ ತಿಳಿಸಿದ್ದಾರೆ.
ಇಂದು ಎನ್ಎಸ್ಎಸ್ ಶಿಬಿರ ಉದ್ಘಾಟನೆ
ಹಾಸನ: ತಾಲೂಕಿನ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ಗೊರೂರಿನ ಎಎನ್ವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜ.24 ರಿಂದ ಜ.30 ರ ವರೆಗೆ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜ.24 ರಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಉದ್ಘಾಟಿಸುವರು. ಪ್ರಾಂಶುಪಾಲ ಡಾ.ಎಂ.ಆರ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. ಗ್ರಾಪಂ ಅಧ್ಯಕ್ಷ ಬಿ.ಎನ್.ಚಂದ್ರಪ್ಪ, ಜಿಪಂ ಸದಸ್ಯ ಮಲ್ಲಿಗೆವಾಳು ದೇವಪ್ಪ, ಮಾಜಿ ಸದಸ್ಯ ಎನ್.ಸಿ.ನ್ರಾಯಣಗೌಡ, ತಾಪಂ ಸದಸ್ಯೆ ಕಮಲಮ್ಮ, ಎಂಪಿಎಂಸಿ ಉಪಾಧ್ಯಕ್ಷ ನಟರಾಜ್ ಭಾಗವಹಿಸುವರು.
ವಿದ್ಯಾರ್ಥಿಗಳ ಸಾಂಸ್ಕೃತಿಕ ಸಮಿತಿ ಉದ್ಘಾಟನೆ
ಹಾಸನ: ಹಾಸನಾಂಬ ಕಾಲೇಜು ಶಿಕ್ಷಣ ಸಂಸ್ಥೆಯ ಸಾಂಸ್ಕೃತಿಕ ಸಮಿತಿಯ ಉದ್ಘಾಟನಾ ಸಮಾರಂಭವನ್ನು ಜ.24 ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ತಹಸೀಲಾರ್ ಮಂಜುನಾಥ್, ಸಂಸ್ಥೆಯ ಅಧ್ಯಕ್ಷ ಎಚ್.ಸಿ.ಯತೀಶ್, ಎಚ್.ಸಿ.ಕವಿತಾ, ಡಾ.ಎಸ್. ಗೀತಾ ಭಾಗವಹಿಸುವರು.
ಸಮಾವೇಶ
ಅರಕಲಗೂಡು: ಇಲ್ಲಿನ ಪೊಟ್ಯಾಟೊ ಕ್ಲಬ್ ಕಸಬಾ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಭಾನುವಾರ ಬೆಳಿಗ್ಗೆ 11ಗಂಟೆಗೆ ಹೊನ್ನವಳ್ಳಿ ಕೆಂಗೆಟ್ಟೆ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ
ಹಾಸನ: ಜಿಲ್ಲಾಡಳಿತ ಹಾಗೂ ಗಣರಾಜ್ಯೋತ್ಸವ ದಿನಾಚರಣೆ ಸಮಿತಿಯಿಂದ 26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಗಣರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗೌರವಾನ್ವಿತ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡುವರು. ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ಉಪಾಧ್ಯಕ್ಷ ಬಿಳಿಚೌಡಯ್ಯ, ನಗರಸಭೆ ಅಧ್ಯಕ್ಷ ಸಿ.ಆರ್.ಶಂಕರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನವಿಲೆ ಅಣ್ಣಪ್ಪ, ತಾಪಂ ಅಧ್ಯಕ್ಷೆ ಮಂಜುಳಾ ನಾಗೇಶ್ ಇತರರು ಭಾಗವಹಿಸುವರು.
ಧ್ವಜಾರೋಹಣ, ಧ್ವಜವಂದನೆ, ನಾಡಗೀತೆ, ರೈತಗೀತೆ, ಗೌರವರಕ್ಷಣೆ, ಗಣರಾಜ್ಯೋತ್ಸವ ಸಂದೇಶ, ಸನ್ಮಾನ, ಪೊಲೀಸ್ ಸಶಸ್ತ್ರ ಪಡೆ, ಹೋಂಗಾರ್ಡ್ಸ್, ಸೇವಾದಳ, ಸ್ಕೌಟ್ಸ್, ಗೈಡ್ಸ್ ಎನ್ಸಿಸಿಯವರಿಂದ ಗೌರವರಕ್ಷೆ, ಶಾಲಾ ವಿದ್ಯಾರ್ಥಿಗಳಿಂದ ವಿಜಯನಗರ ವೈಭವ ರೂಪಕ ನಡೆಯಲಿದೆ.
ಸಂಜೆ 6ಕ್ಕೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶಿಕ್ಷಣ ಇಲಾಖೆ ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಸವನಾಯಕ ನೇಮಕ
ಹಾಸನ: ಅರಕಲಗೂಡು ತಾಲೂಕು ಕಾಂಗ್ರೆಸ್ ಪರಿಶಿಷ್ಟ ಪಂಗಡದ ನೂತನ ಅಧ್ಯಕ್ಷರಾಗಿ ಬಸವನಾಯಕ, ಕಾರ್ಯದರ್ಶಿಯಾಗಿ ಚಂದ್ರನಾಯಕ, ಉಪಾಧ್ಯಕ್ಷರಾಗಿ ಕೃಷ್ಣನಾಯಕ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಅಧಕ್ಷ ಚೆಲುವನಹಳ್ಳಿ ಶೇಖರಪ್ಪ ತಿಳಿಸಿದ್ದಾರೆ.