28ಕ್ಕೆ ಐತೀರ್ಪು ಅಧಿಸೂಚನೆ: ಗೌಡ
ಚನ್ನರಾಯಪಟ್ಟಣ: ಕಾವೇರಿ ನ್ಯಾಯಾಧಿಕರಣ ಐತೀರ್ಪು ಅಧಿಸೂಚನೆ ಜ.28ರಂದು ಪ್ರಕಟಗೊಳ್ಳಲಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುವುದು ಖಚಿತ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು. ತಾಲೂಕಿನ ಹಿರೀಸಾವೆ ಹಾಗೂ ಶ್ರವಣಬೆಳಗೊಳದಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 'ಕಾವೇರಿ ನ್ಯಾಯಾಧಿಕರಣ ಐತೀರ್ಪು ಅಧಿಸೂಚನೆ ಪ್ರಕಟವಾಗುವ ಮುನ್ನ ರಾಜ್ಯಕ್ಕೆ ಅನ್ಯಾಯವಾಗದಂತೆ ಗಮನಹರಿಸಿ ಎಂದು ಪ್ರಧಾನಿಗೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಅವರು ತಮಿಳುನಾಡಿನ ಹಿತರಕ್ಷಣೆ ಮಾಡುವ ಲಕ್ಷಣಗಳು ಕಾಣುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಮಂತ್ರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದರೂ ಅವರಿಗೆ ಅಧಿಕಾರ ಮುಖ್ಯವಾಗಿದೆ' ಎಂದು ಟೀಕಿಸಿದರು. ರಾಜ್ಯದ ಹಿತ ಕಾಪಾಡುವಂತೆ ಪ್ರಧಾನಿ ಅವರಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಶೆಟ್ಟರ್ ಅವರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅವರು ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಸಚಿವ ರಾಮದಾಸ್ ಕೋರ್ಟಿಗೆ ಹಾಜರ್
ಮೈಸೂರು: 2008ರ ವಿಧಾನಸಭಾ ಚುನಾವಣಾ ಕಾಲಕ್ಕೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಕರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಗುರುವಾರ ಇಲ್ಲಿನ 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಧೀಶರಾದ ದಮಯಂತಿ ಅವರು ಹಿಂದಿನ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿ, ಗುರುವಾರ ಹಾಜರುಪಡಿಸುವಂತೆ ಸೂಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

