28 - 29 ರಂದು ಆದಿಶ್ರೀ ಪುಣ್ಯಾರಾಧನೆಗೆ ಬಸ್ ಸೌಲಭ್ಯ
ಹಾಸನ: ಪದ್ಮಭೂಷಣ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಾರಾಧನೆ ಜ.28 ಮತ್ತು 29 ರಂದು ನಾಗಮಂಗಲ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು, ಅಲ್ಲಿಗೆ ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಮುದ್ದೇಗೌಡ ತಿಳಿಸಿದರು. ನಗರದ ಶ್ರೀಆದಿಚುಂಚನಗಿರಿ ಶಾಖಾ ಮಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರ ಪುಣ್ಯಾರಾಧನಾ ಕಾರ್ಯಕ್ರಮವು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆಯಿಲಿದೆ. ಈ ಪುಣ್ಯ ಸ್ಮರಣೆಯಲ್ಲಿ ಸಮಸ್ತ ಭಕ್ತಾಧಿಗಳು ಭಾಗವಹಿಸಿ ಶ್ರೀಗುರು ಕೃಪೆಗೆ ಪಾತ್ರರಾಗಬೇಕು ಎಂದು ಮನವಿ ಮಾಡಿದರು.
ಪುಣ್ಯಾರಾಧನಾ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕು. ಆದಕ್ಕಾಗಿ ಸಾರಿಗೆ ಸಂಸ್ಥೆಯಿಂದ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ನೇರವಾಗಿ ಶ್ರೀಕ್ಷೇತ್ರಕ್ಕೆ ಬಸ್ಗಳು ತೆರಳಲಿವೆ ಎಂದು ಹೇಳಿದರು. ಶಾಸಕ ಎಚ್.ಎಸ್.ಪ್ರಕಾಶ್, ಪಟೇಲ್ ಶಿವರಾಂ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಜವರೇಗೌಡ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನವಿಲೆ ಅಣ್ಣಪ್ಪ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

