ಸಂಜೆ 7 ರ ನಂತರವೂ ಹಾರಾಡಿದ ಧ್ವಜ..
ಅರಸೀಕೆರೆ: ತಾಲೂಕಿನ ಜೆ.ಸಿ.ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 64ನೇ ಗಣರಾಜ್ಯೋತ್ಸವ ಆಚರಣಾ ಅಂಗವಾಗಿ ಧ್ವಜಾರೋಹಣ ಮಾಡಿದ್ದ ರಾಷ್ಟ್ರಧ್ವಜವನ್ನು ಸಂಜೆ 7 ಗಂಟೆಯಾದರೂ ತೆಗೆದಿರಲಿಲ್ಲ.
ಅಷ್ಟೆ ಅಲ್ಲದೆ, ಅದೇ ಗ್ರಾಮದ ಉರ್ದು ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಆರಿಸಿದ ಪ್ರಸಂಗ ಬೆಳಕಿಗೆ ಬಂದಿದೆ.
ಆಸ್ಪತ್ರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಂಜೆ 7 ಗಂಟೆಯಾದರೂ ರಾಷ್ಟ್ರಧ್ವಜ ಹಾರುತ್ತಲೇ ಇತ್ತು. ಉರ್ದು ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿರುವುದನ್ನು ಗಮನಿಸದ ಗ್ರಾಮಸ್ಥರು, ರಾಷ್ಟ್ರಪ್ರೇಮಿಗಳು ಸಂಬಂಧಪಟ್ಟವರ ಗಮನಕ್ಕೆ ತಂದಾಗ ಅದನ್ನು ಸರಿಪಡಿಸಲಾಯಿತು.
ರಾಷ್ಟ್ರಧ್ವಜದ ಪಾವಿತ್ರ್ಯತೆ ಅರಿಯದ ಕೆಲವರು ಮಾಡುವ ಇಂತಹ ಅಚಾತುರ್ಯಕ್ಕೆ ಕಡಿವಾಣ ಹಾಕುವ ಸಲುವಾಗಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮುಂದೆ ಇಂತಹ ತಪ್ಪು ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

