ಅಂಧರಿಂದ ಸಮಾಜದಲ್ಲಿ ಉತ್ತಮ ಸಾಧನೆ: ನಾಗರಾಜ್
ಹಾಸನ: ಸಮನ್ವಯ ಚಾರಿಟಬಲ್ ಟ್ರಸ್ಟ್ಫಾರ್ ದಿ ಡಿಸೇಬಲ್ಡ್ ಸಂಸ್ಥೆ ಉದ್ಘಾಟನಾ ಸಮಾರಂಭ ಹಾಗೂ ಲೂಯಿ ಬ್ರೈಲ್ ಅವರ 204 ನೇ ಜಯಂತಿ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮದಲ್ಲಿ ಎಂ. ಕೃಷ್ಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ನಾಗರಾಜ್ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ, ಅಂಧರಿಗೆ ಅನುಕಂಪ ತೋರಿಸುವುದಕ್ಕಿಂತ ಅವಕಾಶ ನೀಡುವುದು ಮುಖ್ಯ. ಕಣ್ಣು ಕಾಣದವರು ಸಮಾಜದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ಅವರಿಗೆ ಲಭ್ಯವಾಗಬೇಕು ಮತ್ತು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಚ್.ಎಸ್.ರಘು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಜನಾರ್ಧನ್, ಮರ್ಕುಲಿ ಗೋಪಾಲೇಗೌಡ, ಅಂಗವಿಕಲ ಕಲ್ಯಾಣಾಧಿಕಾರಿ ಮಲ್ಲೇಶ್, ಯತೀಶ್ ಹಾಗೂ ಸಂಸ್ಥೆಯ ಅಧ್ಯಕ್ಷ ಮೋಹನ್ ತೇಜಸ್ವಿ ಇದ್ದರು.
ಇದೇ ಸಂದರ್ಭದಲ್ಲಿ ಅಂಧರಿಗೆ ಊರುಗೋಲುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಹಲವು ಯುವಕರು ರಕ್ತದಾನ ಮಾಡಿದರು. ಸಂಸ್ಥೆಯ ಅಧ್ಯಕ್ಷ ಮೋಹನ್ ತೇಜಸ್ವಿ ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ ವಿವರ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

