ಹಾಸನ

ಕಾಂಕ್ರೀಟ್ ರಸ್ತೆಯಲ್ಲಿ ಸಿಮೆಂಟ್ ನಾಪತ್ತೆ

Published On :

ಅರಸೀಕೆರೆ: ಹುಳಿಯಾರ್ ತಿರುವಿನಿಂದ ಮಾಲೇಕಲ್ ತಿರುಪತಿಯವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 1 ಕೋಟಿ ಬಿಡುಗಡೆಯಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ಸುಮಾರು 650ಮೀ ಕಾಂಕ್ರೀಟ್ ರಸ್ತೆ ಈಗಾಗಲೇ ನಿರ್ಮಾಣವಾಗಿದೆ. ಆದರೆ, ಅಲ್ಲಲ್ಲಿ ಸಿಮೆಂಟ್ ಕೊಚ್ಚಿ ಹೋಗಿ ಜಲ್ಲಿಕಲ್ಲು ಕಾಣಲಾರಂಭಿಸಿದೆ. ಹಾಗಾಗಿ ಈ ಕಾಮಗಾರಿಯನ್ನು ಸ್ಥಗಿತಗೊಳಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಪಂ ಮಾಜಿ ಅಧ್ಯಕ್ಷ ಜಿ.ಎಸ್.ಗುರುಸಿದ್ದಪ್ಪ ಒತ್ತಾಯಿಸಿದ್ದಾರೆ.
ಕನ್ನಡಪ್ರಭ ಪತ್ರಿಕೆಯಲ್ಲಿ ಭಾಗ 11ರಲ್ಲಿ ಈ ಕಳಪೆ ಕಾಮಗಾರಿಯ ಬಗ್ಗೆ ಪ್ರಕಟವಾದ ವರದಿಯನ್ನು ವಿವರವಾಗಿ ತಿಳಿಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತಾದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳಿಂದಾಗಿ ಇನ್ನುಳಿದ ಅರ್ಧ ಕಾಮಗಾರಿ ಕಳಪೆ ಗುಣಮಟ್ಟದ ಮರಳು ಇನ್ನಿತರ ವಸ್ತುಗಳಿಂದ ನಡೆಯುತ್ತಿರುವುದನ್ನು ಅರಿತು ಸೋಮವಾರ ಸುದ್ದಿಗಾರರೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲಿಸಿಲಾಯಿತು.
ಆಗ ಸರ್ಕಾರ ಭಕ್ತರ ಅನುಕೂಲಕ್ಕಾಗಿ ಕೊಟ್ಟ ಹಣವನ್ನು ನುಂಗಲು ಕಳಪೆ ವಸ್ತುಗಳನ್ನು ಬಳಸಿರುವುದು ಕಂಡುಬಂತು.
ಅವರು ಬಳಕೆಗೆ ತಂದಿದ್ದ ಮರಳನ್ನು  ಪ್ರದರ್ಶಿಸಿದಾಗ ಅದು ಕಾಮಗಾರಿಗೆ ಬಳಸಲು ಯೋಗ್ಯವಾಗಿರಲಿಲ್ಲ. ರಸ್ತೆ ಈಗಾಗಲೇ ಹಾಳಾಗಿದೆ.
ಗುತ್ತಿಗೆದಾರರು ಈಗಲಾದರೂ ಉತ್ತಮ ಹಾಗೂ ಗುಣಮಟ್ಟದ ಸಾಮಗ್ರಿಗಳನ್ನು ಬಳಸದೆ ಪುನಃ ಕಳಪೆ ಕಾಮಗಾರಿಗೆ ಮುಂದಾಗಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು.
ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗಿದ್ದು ಈಗಾಗಲೇ ಮಾಲೇಕಲ್, ಸಾಲದೆಂಬಂತೆ ಸುಮಾರು 1 ಕೋಟಿಗೂ ಅಧಿಕ ವೆಚ್ಚದಲ್ಲಿ ತಾಲೂಕಿನ ಬಂಡೀಹಳ್ಳಿ ರೇವಣ್ಣಸಿದ್ದೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆಯೂ ಕಳಪೆ  ಕಾಮಗಾರಿಯಿಂದ ಕೂಡಿದೆ.
ಕಾಮಸಮುದ್ರ, ಬಂಡೀಹಳ್ಳಿ, ಸಂಕೋಡನಹಳ್ಳಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಈಗಾಗಲೇ ಹೊಸದಾಗಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.
ಅಲ್ಲಿಯೂ ಸಾಕಷ್ಟು ಲೋಪದೋಷಗಳು ಸಂಭವಿಸುವ ಸಾಧ್ಯತೆ ಇದ್ದು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ ತಕ್ಷಣ ಈ ಕಾಮಗಾರಿಯ ಬಿಲ್ ತಡೆಹಿಡಿದು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು. ಕಾಮಗಾರಿ ಕೈಗೆತ್ತಿಕೊಂಡಿರುವ ಸ್ಥಳಗಳಿಗೆ ಉನ್ನತಾಧಿಕಾರಿಗಳು ಭೇಟಿ ನೀಡಿ ಸಮಗ್ರ ಮಾಹಿತಿ ಸಂಗ್ರಹಿಸಿ ತನಿಖೆಗೆ ಆದೇಶಿಸದಿದ್ದರೆ ಸಂಬಂಧಿಸಿದ ಕಚೇರಿಯ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.