ಹಾಸನ

ಫೆ.1ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ

Published On :

ಹಾಸನ: ಜಿಲ್ಲಾ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಹಾಗೂ ಹೊಯ್ಸಳ ಜಾನಪದ ಕಲಾಸಂಸ್ಥೆ ಇವರ ಸಹಯೋಗದಲ್ಲಿ ಫೆ.1ರಂದು ಹಾಸನ ನಗರದ ಕಲಾಭವನದಲ್ಲಿ ಜಿಲ್ಲಾ ಯುವ ಸಮಾವೇಶ ಪ್ರಯುಕ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಹಮಿಕೊಳ್ಳಲಾಗಿದೆ.  ಜಾನಪದ ನೃತ್ಯ, ಜಾನಪದ ಗೀತೆ, ಭಾವಗೀತೆ, ಕೋಲಾಟ, ಗೀಗೀ ಪದ, ಲಾವಣಿ, ತಮಟೆ ವಾದ್ಯ, ವೀರಗಾಸೆ, ಕಂಸಾಳೆ, ಡೊಳ್ಳು ಕುಣಿತ, ಭರತನಾಟ್ಯ, ಭಜನೆ, ರಾಷ್ಟ್ರೀಯ ಭಾವೈಕ್ಯತಾ ಗೀತೆ ಸ್ಪರ್ಧೆಗಳಲ್ಲಿ  ಭಾಗವಹಿಸಲು ಇಚ್ಛಿಸುವ ಯುವಕ, ಯುವತಿ, ಮಹಿಳಾ ಮಂಡಳಿಗಳು, ಸಂಘದ ಸದಸ್ಯರು, ಶಾಲಾ ಕಾಲೇಜಿನ ಸಾಂಸ್ಕೃತಿಕ ಕಲಾ ತಂಡಗಳು ತಮ ಹೆಸರನ್ನು ಹಾಸನ ಜಿಲ್ಲಾ ನೆಹರು ಯುವ ಕೇಂದ್ರದಲ್ಲಿ ಮುಂಚಿತವಾಗಿ ಅಥವಾ ಕಾರ್ಯಕ್ರಮ ನಡೆಯುವ ದಿನ ಹಾಸನದ ಕಲಾ ಭವನದಲ್ಲಿ ಬೆಳಿಗ್ಗೆ 10 ಗಂಟೆಯೊಳಗೆ ನೋಂದಾಯಿಸಿಕೊಳ್ಳಲು  ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.