ಹಾಸನ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Published On :

ಹಾಸನ: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಇಬ್ಬರನ್ನು ತಾಲೂಕಿನ ದಂಡನಾಯಕನಹಳ್ಳಿಯಲ್ಲಿ ಗುರುವಾರ ಬಂಧಿಸಲಾಗಿದೆ.
ತಾಲೂಕಿನ ಕಟ್ಟಾಯ ಹೋಬಳಿ ದುಂಡನಾಯಕನಹಳ್ಳಿ ಗ್ರಾಮದ ವಿಜಯ (73), ತಮ್ಮ ಮನೆಯ ಮುಂದೆ ಅಕ್ರಮವಾಗಿ ಮದ್ಯ ಮಾರುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
 ಮಾರಾಟಕ್ಕಿಟ್ಟಿದ್ದ 1720 ಬೆಲೆಯ 180 ಎಂಎಲ್‌ನ 40 ಒರಿಜಿನಲ್ ಛಾಯ್ಸ್ ಡಿಲೆಕ್ಸ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.  ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ತಾಲೂಕಿನ ದುದ್ದ ಆರ್‌ಎಸ್‌ಎಲ್ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ನಾರಾಯಣ್ (24) ಎಂಬವರನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ 2082 ಬೆಲೆಯ 180 ಎಂಎಲ್‌ನ 48 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.
ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.