ಹಾಸನ

ಕುಡಿವ ನೀರಿಗೆ ಹಾಹಾಕಾರ: ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Published On :

ಆಲೂರು: ತಾಲೂಕಿನ ಕದಾಳು ಗ್ರಾಮದಲ್ಲಿ ಕುಡಿಯುವ ನೀರಿನ ಅಸಮರ್ಪಕ ಸರಬರಾಜಿಗೆ ರೊಚ್ಚಿಗೆದ್ದ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಖಾಲಿ ಕೊಡಗಳೊಂದಿಗೆ ಕಚೇರಿ ಎಂದುರು ಪ್ರತಿಭಟನೆ ನಡೆಸಿದರು.
ಕಳೆದ 3 ತಿಂಗಳಿಂದ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ಗ್ರಾಮದಲ್ಲಿರುವ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಬತ್ತಿ ಹೋಗಿ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ಕುಡಿಯುವ ನೀರಿಗಾಗಿ ದೂರದ 5 ಕಿಮಿ ದೂರದಲ್ಲಿರುವ ಯಗಚಿ ಹೊಳೆಯಿಂದ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಹೊಳೆಯ ನೀರು ಕೂಡ ಕಲುಷಿತಗೊಂಡಿದ್ದು, ಇದರಿಂದಾಗಿ ಗ್ರಾಮಸ್ಥರು ರೋಗಗಳಿಗೆ ತುತ್ತಾಗುತ್ತಿದ್ದು, ಈ ಸಂಬಂಧ ಹಲವಾರು ಬಾರಿ ಪಂಚಾಯ್ತಿ ಅಧಿಕಾರಿಗಳಿಗೆ ದೂರು ನೀಡಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಗ್ರಾಮದಲ್ಲಿ ಪಂಚಾಯ್ತಿ ಅನುಮತಿಯಿಲ್ಲದೇ ಕೆಲವರು ಅಕ್ರಮವಾಗಿ ನಲ್ಲಿ ಅಳವಡಿಸಿಕೊಂಡಿದ್ದು, ಸಂಪ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದಾಗಿಯೇ ನೀರೊದಗಿಸಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ನಾಳೆಯಿಂದಲೇ ಗ್ರಾಮದಲ್ಲಿ ಪಬ್ಲಿಕ್ ನಲ್ಲಿಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.