ಯುವಶಕ್ತಿ ಒಂದಾಗಿ ಶ್ರಮಿಸಿದರೆ ಮಾತ್ರ ದೇಶ ಅಭಿವೃದ್ಧಿ
ಹಾಸನ: ಯುವಶಕ್ತಿ ಒಂದಾಗಿ ಶ್ರಮಿಸಿದರೆ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ ಎಂದು ತಹಸೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ರಾಷ್ಟ್ರೀಯ ಸೇವಾ ಯೋಜನಾ ಘಟಕ, ವ್ಯಕ್ತಿತ್ವ ವಿಕಸನ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ವಡಿಸಿದ್ದ ನಾಯಕತ್ವ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಸ್ವರಾಜ್ಯಗಳನ್ನು ಸಕಾರಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕಾದ ಅವಶ್ಯಕತೆ ಇದ್ದು, ಯುವಕರು ಹಳ್ಳಿಗಳನ್ನು ಪುನಃಶ್ಚೇತನ ಗೊಳಿಸುವಲ್ಲಿ ಹೋರಾಟ ನಡೆಸಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಜನಜೀವನದ ಬಗ್ಗೆ ಅರಿವು ಹಾಗೂ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳುವಂತೆ ಮಾಡಬೇಕಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಳ್ಳಉವ ಮೂಲಕ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪ್ರಾಂಶುಪಾಲ ಪ್ರೊ. ಎಚ್.ವಿ. ಲಕ್ಷ್ಮೀನಾರಾಯಣ ಮಾತನಾಡಿ ಒಂದು ಸಮೂಹವನ್ನು ಮುನ್ನೆಡೆಸುವಂತಹ ಗುಣ ಹೊಂದಿರುವವರು ಉತ್ತಮ ನಾಯಕರಾಗಲು ಸಾಧ್ಯ ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸುವಂತಹ ನಾಯಕರು ಇಂದು ಕಣ್ಮರೆಯಾಗುತಿದ್ದು, ಸಮಾಜದ ಅಭಿವೃದ್ಧಿಗಾಗಿ ದುಡಿಯುವಂತಹ ಯುವ ನಾಯಕರು ಇಂದು ದೇಶಕ್ಕೆ ಬೇಕಾಗಿದೆ ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು, ಎಂ.ಕೆ. ಮಹೇಶ್, ಡಾ. ಡಿ. ಶ್ರೀನಿವಾಸ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಆಂಥೋಣಿ ಮೇರಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ದಿಲೀಪ್ಕುಮಾರ್, ಉಪನ್ಯಾಸಕರಾದ ಡಾ. ಪುಟ್ಟರಾಜಪ್ಪ ಹಾಗೂ ಯೋಗೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

