ಹಾಸನ

ಆಲೂರಲ್ಲಿ ಶಾಸಕ ಕುಮಾರಸ್ವಾಮಿ ಮತ ಯಾಚನೆ

Published On :

ಆಲೂರು: ಆಲೂರು-ಪಟ್ಟಣ ಪಂಚಾಯ್ತಿಗೆ ಮಾ.7 ರಂದು ನಡೆವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಮತದಾರರನ್ನು ಕೋರಿದರು. ಅವರು ಪಟ್ಟಣದ 4ನೇ ವಾರ್ಡಿನಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗು ಎಚ್.ಡಿ.ರೇವಣ್ಣ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದು, ಸ್ಥಳೀಯ ಸಂಸ್ಥೆಗಳಿಗೆ ಅಪಾರ ಅನುದಾನ ನೀಡಿ ನಾಗರಿಕರ ಅನುಕೂಲಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ತಾವು ಮತ ನೀಡುವ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿ ಮಾಡಿ ಮತ್ತೊಮ್ಮೆ ಜೆಡಿಎಸ್ ಪಪಂ ಆಡಳಿತ ಚುಕ್ಕಾಣಿ ಹಿಡಿದು ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್.ಮಂಜೆಗೌಡ, ಪಪಂ ಮಾಜಿ.ಅಧ್ಯಕ್ಷ ಎ.ಎಸ್. ನಿಂಗರಾಜ್, ಅಭ್ಯರ್ಥಿಗಳಾದ ದೊ.ಕಣಗಾಲ್ ಜಗದೀಶ್, ಕವಳೀಕೆರೆ ಈರಣ್ಣಯ್ಯ, ಗ್ರಾಪಂ .ಸದಸ್ಯ ಧರ್ಮ, ಹೆಚ್.ಇ.ದ್ಯಾವಪ್ಪ, ಗೌಹರ್ ಜಾನ್, ಶಾನು, ಅಭ್ಯರ್ಥಿಗಳಾದ ಶಮೀಮಾ ಬೇಗಂ,ಕಬೀರ್,ಜಾಫರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.