ಶೆಟ್ಟರ್ ದುರ್ಬಲ ಮುಖ್ಯಮಂತ್ರಿ: ಮಂಜುಳಾ
ಅರಸೀಕೆರೆ: ಕಾವೇರಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ, ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳ ತಡೆಗಟ್ಟುವಲ್ಲಿ ವಿಫಲರಾಗಿರುವ ಜಗದೀಶ್ ಶೆಟ್ಟರ್ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿಯೆಂದು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಹಾಗೂ ಕೆಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಟೀಕಿಸಿದರು.
ಪಟ್ಟಣದಲ್ಲಿ ಭಾನುವಾರ ಕೆಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿರ್ಣಾಯಕ ವಿಷಯಗಳಲ್ಲಿ ಕಠಿಣ ತೀರ್ಮಾನ ಕೈಗೊಳ್ಳುವಲ್ಲಿ, ರಾಜ್ಯದ ಪರ ಧ್ವನಿ ಎತ್ತುವಲ್ಲಿ ಅಸಮರ್ಥರಾಗಿರುವ ಜಗದೀಶ್ ಶೆಟ್ಟರ್ ಕುರ್ಚಿ ಪ್ರೀತಿಯಿಂದ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆಯೇ ವಿನಃ ರಾಜ್ಯದ ಅಭಿವೃದ್ಧಿಗಾಗಿ ಅಲ್ಲ ಎಂದು ಛೇಡಿಸಿದರು.
ಲವ್ ಜಿಯಾದ್ ಬಗ್ಗೆ ಮಾತನಾಡುವ ಇವರು ರಾಜ್ಯದಲ್ಲಿ ಪ್ರತಿವರ್ಷ 5ಸಾವಿರ ಯುವತಿಯರು ಕಣ್ಮರೆಯಾಗುತ್ತಿದ್ದರೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಆಸಿಡ್ ದಾಳಿ, ಅತ್ಯಾಚಾರದಂತಹ ಪ್ರಕರಣಗಳು ಮರುಕಳಿಸುತ್ತಿದ್ದರೂ ಆರೋಪಿಗಳು ರಾಜಾರೋಷವಾಗಿ ತಿರುಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿ.ಎಸ್. ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಭಾಗ್ಯಲಕ್ಷ್ಮೀ, ವಿಧವಾವೇತನ, ಹೆಣ್ಣುಮಕ್ಕಳಿಗೆ ಸೈಕಲ್ ವಿತರಣೆ ಹಾಗೂ ವಿದ್ಯಾರ್ಥಿನಿಯರಿಗಾಗಿ ವಿಶೇಷ ವಿದ್ಯಾರ್ಥಿವೇತನದಂತಹ ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವುಗಳನ್ನೇ ಮುಂದಿಟ್ಟು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಾಚನೆ ನಡೆಸುತ್ತಿದ್ದೇವೆ. ಶೇ.50ರಷ್ಟು ಸ್ಥಳೀಯ ಸಂಸ್ಥೆಗಳಲ್ಲಿ ಕೆಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

