ಹಾಸನ

ಯುವಕ ನೇಣಿಗೆ ಶರಣು

Published On :

ಹೊಳೆನರಸೀಪುರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತಾನು ಕಾರ್ಯನಿರ್ವಹಿಸುತ್ತಿದ್ದ ಸ್ಟುಡಿಯೋದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾಗಿರುವ ಯುವಕನನ್ನು ವೀರಭದ್ರ(26) ಎಂದು ಗುರುತಿಸಲಾಗಿದೆ. ಈತ ನರದೌರ್ಬಲ್ಯ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದುದಾಗಿ ವರದಿಯಾಗಿದೆ. ಈತ ಪಟ್ಟಣದ ಸುಭಾಷ್‌ಚೌಕದಲ್ಲಿನ ಲಕ್ಷ್ಮೀ ಸ್ಟುಡಿಯೋದಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.  ವೀರಭದ್ರ ಸ್ಟುಡಿಯೋದ ಬೀಗವನ್ನು ಮಾಲೀಕ ಅಶೋಕ್ ಅವರಿಂದ ಪಡೆದು ಸ್ಟುಡಿಯೋ ತೆರದವನು, ಒಳಗಿನಿಂದ ಚಿಲಕ ಹಾಕಿ ಸ್ಟುಡಿಯೋದಲ್ಲಿನ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.