ಹಾಸನ

'ಶಿಬಿರಗಳಿಂದ ನಾಯಕತ್ವ ಗುಣ'

Published On :

ಜಾವಗಲ್: ವ್ಯಕ್ತಿತ್ವ ವಿಕಸನಗೊಳ್ಳಲು ನಾಯಕತ್ವದ ಗುಣ ಮೈಗೂಡಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದು ತಾಪಂ ಸದಸ್ಯೆ ರಾಜೇಶ್ವರಿ ಶಿವಾನಂದ್ ಅವರು ತಿಳಿಸಿದರು.  
 ತಿಮ್ಮನಹಳ್ಳಿಯಲ್ಲಿ ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಿಶೇಷ ಶಿಬಿರವನ್ನು  ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಿಗುವ ಅವಕಾಶ ಸದುಪಯೋಗಪಡಿಸಿ ಕೊಳ್ಳಬೇಕೆಂದರು.  
 ಶಿಬಿರಗಳಿಂದ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಸಾಮಾಜಿಕ ಆರ್ಥಿಕ ಹಾಗೂ ನಾನಾ  ಕ್ಷೇತ್ರಗಳಲ್ಲಿನ ವಿಚಾರಗಳನ್ನು ತಿಳಿದುಕೊಳ್ಳಲು ಉತ್ತಮ ಅವಕಾಶವಿರುತ್ತದೆ. ಗ್ರಾಮದಲ್ಲಿ ಸ್ವಚ್ಛತೆ ಪರಿಸರ ಸಂರಕ್ಷಣೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದರು. ಪತ್ರಕರ್ತ ರವಿಶಂಕರ್ ಶಿಬಿರಾರ್ಥಿಗಳಾದ ರಘು, ಮನುಶೆಟ್ಟಿ ಚೇತನ್ ಮಾನಸ ಮಾತನಾಡಿದರು.
ಪ್ರಾಂಶುಪಾಲ ರೂಪ್‌ರಾಜ್ ಚಂದನ್ ಅಧ್ಯಕ್ಷತೆ ವಹಿಸಿದ್ದು, ಶಿಬಿರದ ಯಶಸ್ಸಿನಲ್ಲಿ ಗ್ರಾಮಸ್ಥರ ಸಹಭಾಗಿತ್ವವೂ ಮುಖ್ಯವಾಗಿದ್ದು ವಿದ್ಯಾರ್ಥಿಗಳೊಂದಿಗೆ ಸಹಕರಿಸಬೇಕೆಂದರು. ಗ್ರಾಪಂ ಅಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ತೀರ್ಥಂಕರ, ಗ್ರಾಮದ ಲಕ್ಕೇಗೌಡ ತಿಮ್ಮಪ್ಪ ರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.