ಹಾಸನ

ಖಾಸಗಿ ವಿವಿ ಸ್ಥಾಪನೆಗೆ ವಿರೋಧ: ಅರಸೀಕೆರೆಯಲ್ಲಿ ಎಬಿವಿಪಿ ಧರಣಿ

Published On :

ಕ.ಪ್ರ. ವಾರ್ತೆ ಟಿ ಅರಸೀಕೆರೆ ಟಿ ಮಾ.5
ರಾಜ್ಯ ಬಿಜೆಪಿ ಸರ್ಕಾರ ಮನಸೋ ಇಚ್ಛೆ ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲು ಹೊರಟಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಉಪ ತಹಶಿಲ್ದಾರ್ ಅಶೋಕ್‌ಗೆ ಮನವಿ ಸಲ್ಲಿಸಿದರು.
ಪಟ್ಟಣದ ಹೊಯ್ಸಳೇಶ್ವರ ಕಾಲೇಜಿನಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಪ್ರತಿಭಟನಾ ಮೆರವಣಿಗೆ ಹೊರಟು ವಿವಿಗಳ ಸ್ಥಾಪನೆ ವಿರುದ್ಧ ಹಾಗೂ ಉನ್ನತ ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದಲ್ಲಿ ಧರಣಿ ನಡೆಸಿದರು.
ಎಬಿವಿಪಿ ಪ್ರಮುಖ ಫೂಲ್‌ಚಂದ್ ಮಾತನಾಡಿ ರಾಜ್ಯ ಸರ್ಕಾರ 21 ಪ್ರತ್ಯೇಕ ಖಾಸಗಿ ವಿವಿಗಳನ್ನು ಸ್ಥಾಪಿಸಲು ಹಸಿರು ನಿಶಾನೆ ತೋರಿದ್ದು, ಯಾವುದೇ ಸ್ಪಷ್ಟ ಮಾರ್ಗಸೂಚಿಗಳಿಲ್ಲದ ಇಂಥ ವಿಶ್ವವಿದ್ಯಾನಿಲಯಗಳಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಧ:ಪಥನಕ್ಕಿಳಿಯಲಿದೆ. ಯಾವುದೇ ಕಾರಣಕ್ಕೂ ವಿವಿ ಸ್ಥಾಪನೆಗೆ ಮುಂದಾಗಬಾರದೆಂದು ಆಗ್ರಹಿಸಿದರು.
ಅಲ್ಲದೇ ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಶುಲ್ಕ, ಮೀಸಲಾತಿ, ರೋಸ್ಟರ್ ಪದ್ಧತಿ ಅಳವಡಿಸಬೇಕು. ಅಧಿವೇಶನದಲ್ಲಿ ಮಂಡಿಸಿರುವ ಖಾಸಗಿ ವಿವಿಗಳ ವಿಧೇಯಕಕ್ಕೆ ಎಬಿವಿಪಿಯಿಂದ ತೀವ್ರ ವಿರೋಧವಿದೆ. ಇದು ಸಾಲದೆಂಬಂತೆ ಯುಜಿಸಿ ಕಪ್ಪುಪಟ್ಟಿಯಲ್ಲಿರುವ ಕೆಲ ಡೀಮ್ಡ್ ವಿವಿಗಳು ಬೇರೆ ಹೆಸರಿನಲ್ಲಿ ಖಾಸಗಿ ವಿವಿಗಳ ಸ್ಥಾಪನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ಇದೆ. ಸರ್ಕಾರ ಯಾವುದೇ ಕಾರಣಕ್ಕೂ ಇಂತಹ ಕಾರ್ಯಕ್ಕೆ ಮುಂದಾಗಬಾರದು. ಒಂದು ವೇಳೆ ವಿದ್ಯಾರ್ಥಿ ವಿರೋಧಿ ನಿಲುವು ಕೈಗೊಂಡಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಗರ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ದಿಲೀಪ್, ರಾಮಕೃಷ, ಹರ್ಷಿತಾ, ಗಿರೀಶ್, ಪ್ರದೀಪ್  ಇನ್ನಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.