ಇಂದು ದಾಂಪತ್ಯ ಅನುಬಂಧ ಕುರಿತು ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಹಾಸನ ಮಾ 8
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಕೌಟುಂಬಿಕ ವ್ಯಾಜ್ಯಗಳ ಮಧ್ಯಸ್ಥಿಕೆ ಕುರಿತ ದಾಂಪತ್ಯದನುಬಂಧ ಕಾರ್ಯಾಗಾರ ಮಾ.9ರಂದು ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಲಿದೆ.
ಬೆಂಗಳೂರಿನ ಮಧ್ಯಸ್ಥಿಕಾ ಕೇಂದ್ರದ ನಿರ್ದೇಶಕ ಎ.ಡಿ.ಚಂದ್ರಶೇಖರ್ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್.ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಲಯನ್ಸ್ ಜಿಲ್ಲಾ ರಾಜ್ಯಪಾಲ ಎಂ.ವಿ.ಸದಾಶಿವ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ವಿ.ವಿಶ್ವನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ. ಬೆಳಿಗ್ಗೆ 10.30ರಿಂದ 12 ರವರೆಗೆ ನಡೆಯುವ ಒಂದನೇ ಅಧಿವೇಶನದಲ್ಲಿ ಭಾರತೀಯ ಪರಂಪರೆ ಮತ್ತು ಕ್ಷಟುಂಬಿಕ ಸಾಮರಸ್ಯ ಎಂಬ ವಿಷಯ ಕುರಿತು ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಬಿ.ಎನ್.ಶಾಸ್ತ್ರಿ ಮತ್ತು ಮಂಗಳೂರಿನ ಮಾನವ ಸಂಪನ್ಮೂಲ ವಿಕಾಸ ಸಂಶೋಧಕ ಡಾ.ಶಿಕಾರಿಪುರ ಕೃಷ್ಣಮೂರ್ತಿ ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 12 ರಿಂದ 1.15ರವರೆಗೆ ಮಾನಸಿಕ ಮತ್ತು ಭಾವನಾತ್ಮಕ ಅಂಶಗಳು ಎಂಬ ವಿಷಯದ ಕುರಿತು ಹಾಸನ ಸರ್ಕಾರಿ ವೈದ್ಯಕೀಯ ಮಹಾ ವಿದ್ಯಾಲಯದ ಡಾ.ಜಿ.ಭಾರತಿ ಮತ್ತು ಹೊಳೆನರಸಿಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಬಿ.ಇರ್ಷಾದ್ ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 2 ರಿಂದ 3.30ರವರೆಗೆ ನಡೆಯುವ 3ನೇ ಅಧಿವೇಶನದಲ್ಲಿ ದಾಂಪತ್ಯ ಸಾಫಲ್ಯ ಎಂಬ ವಿಷಯವಾಗಿ ಕನ್ನಡ ಪ್ರಜಾರಿ ಹಿರೇಮಗಳೂರು ಕಣ್ಣನ್ ಉಪನ್ಯಾಸ ನೀಡಲಿದ್ದಾರೆ.
ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮುಸ್ತಾಫ ಹುಸೇನ್, ಎಸ್.ಎ.ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಜಿ.ಎಸ್.ವಿಶ್ವನಾಥ್, ಎಚ್.ಎಸ್.ಆನಂದ್ ಅವರು
ಕೋರಿದ್ದಾರೆ.
ಆಯುರ್ವೇದ ಕಾರ್ಯಾಗಾರ
ನಗರದ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಮಾ.9 ರಂದು ಕರ್ನಾಟಕ ರಾಜ್ಯದ ಆಯುಷ್ ನಿರ್ದೇಶನಾಲಯ ಪ್ರಾಯೋಜಕತ್ವ ಹಾಗೂ ಜಿಲ್ಲಾ ಆಯುಷ್ ಇಲಾಖೆ ಮತ್ತು ಎಸ್ಡಿಎಂ ಆಯುರ್ವೇದ ಕಾಲೇಜಿನ ಸಹಭಾಗಿತ್ವದಲ್ಲಿ, ಒಂದು ದಿನದ ಜಿಲ್ಲಾ ಆಯುರ್ವೇದ ಪುನಶ್ಚೇತನ ಕಾರ್ಯಾಗಾರ ಏರ್ಪಡಿಸಲಾಗಿದೆ.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಚ್.ನಾಗರಾಜ್, ಹಾಸನಾಂಬ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕ ಡಾ. ರಾಚೇಗೌಡ ಭಾಗವಹಿಸುವರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಸನ್ನ ನರಸಿಂಹ ರಾವ್ ಅಧ್ಯಕ್ಷತೆ ವಹಿಸುವರು. ವೈಜ್ಞಾನಿಕ ಚರ್ಚಾ ಅವಧಿಯಲ್ಲಿ ಸಂಸ್ಥೆಯ ನುರಿತ ಆಯುರ್ವೇದ ತಜ್ಞರು ಭಾಗವಹಿಸಲಿದ್ದಾರೆ. ಹಾಸನ ಜಿಲ್ಲೆಯ 60 ಕ್ಕೂ ಹೆಚ್ಚು ಸರ್ಕಾರಿ ಆಯುರ್ವೇದ ವೈದ್ಯರು, 20ಕ್ಕೂ ಹೆಚ್ಚು ದಂತ ವೈದ್ಯರು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ.
ಕೃಷಿ ವಿವಿ ವಾರ್ಷಿಕೋತ್ಸವ
ತಾಲೂಕಿನ ಕಾರೆಕೆರೆ ಸಮೀಪ ಇರುವ ಕೃಷಿ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಲಯಗಳ ವಾರ್ಷಿಕೋತ್ಸವ ಮಾ. 9 ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಕೃಷಿ ವಿವಿ ಉಪ ಕುಲಪತಿ ಡಾ.ಕೆ.ನಾರಾಯಣಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ, ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ವಿ.ಸಿ. ಅರವಿಂದ್, ಡೀನ್ ಡಾ.ಕೆ.ಆರ್.ಶ್ರೀರಾಮುಲು, ಡಾ.ಎಲ್. ಮಂಜುನಾಥ್ ಭಾಗವಹಿಸುವರು.
ನರರೋಗ ತಜ್ಞರ ಭೇಟಿ
ಮೆದುಳು ಹಾಗೂ ನರ ರೋಗ ತಜ್ಞ ಡಾ. ಹಾಲ್ಪ್ರಶಾಂತ್ ಮಾ.9 ಮತ್ತು 10 ರಂದು ನಗರಕ್ಕೆ ಭೇಟಿ ನೀಡಲಿದ್ದು, ಎಸ್ಎಸ್ಎಂ ಖಾಸಗಿ ಆಸ್ಪತ್ರೆಯಲ್ಲಿ ಸಲಹೆ ಹಾಗೂ ಚಿಕಿತ್ಸೆಗೆ ಲಭ್ಯವಿರುತ್ತಾರೆ.
ಮೆದುಳು ಹಾಗೂ ನರ ರೋಗಕ್ಕೆ ಸಂಬಂಧಿಸಿದ ರೋಗಿಗಳು ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಲಹೆ ಸೂಚನೆ ಪಡೆಯಬಹುದು ಎಂದು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9940083017 ಅಥವಾ 9844271271 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

