ಹಾಸನ

'ಪ್ರತಿಯೊಬ್ಬರಲ್ಲೂ ಸುಪ್ತ ಪ್ರತಿಭೆ'

Published On :

ಕಪ್ರವಾರ್ತ್ಣೆಹೊಳೆನರಸೀಪುರ ್ಣ ಮಾ.9
ಪ್ರತಿಯೊಬ್ಬರಲ್ಲೂ ತನ್ನದೇ ಆದ ಶಕ್ತಿ, ಸಾಮರ್ಥ್ಯ ಮತ್ತು ಸುಪ್ತವಾದ ಪ್ರತಿಭೆಗಳಿರುತ್ತವೆ.
 ಅಂತಹ ಪ್ರತಿಭೆಗಳನ್ನು ಇಂದಿನ ಯುವ ಸಮುದಾಯ ಸ್ವಾಮಿ ವಿವೇಕಾನಂದರ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ವಾಣಿಯಂತೆ ದೇಶದ ಸರ್ವತೋಮುಖ ಏಳಿಗೆಗೆ ಬಳಸಿದಾಗ ಮಾತ್ರವೇ ಈ ದೇಶದ ಅಭಿವೃದ್ಧಿ ಸಾಧ್ಯ ಎಂದು ತಾಲೂಕಿನ ಹಳ್ಳಿಮೈಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಎಚ್.ಜೆ.ಬೋರಯ್ಯ ಹೇಳಿದರು.
 ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಿಂದ ದೈಹಿಕ ಶಿಕ್ಷಣ ನಿರ್ದೇಶಕ ಶಿವರಾಜ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಗೋವಿಂದಪ್ಪ ಮಾತನಾಡಿ ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಉಗ್ರಗಾಮಿಗಳ ಅಟ್ಟಹಾಸ ಹಾಗೂ ಭ್ರಷ್ಟಾಚಾರದಂತಹ ಮಾರಕ ಪಿಡುಗುಗಳ ತಡೆಗೆ ವಿದ್ಯಾರ್ಥಿ  ಸಮುದಾಯ ಮುಂದಾಗಬೇಕಿದೆ ಎಂದು ತಿಳಿಸಿದರು.
  ಮೊದಲಿಗೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳೂ ಹಳ್ಳಿಮೈಸೂರು ಗ್ರಾಮದಲ್ಲಿನ ವಿವಿಧ ರಸ್ತೆಗಳಲ್ಲಿ ವಿವೇಕಾನಂದರ ಭಾವಚಿತ್ರದ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.