ಜೀವನದಲ್ಲಿ ಕುವೆಂಪು ವೈಚಾರಿಕತೆ ಅಳವಡಿಸಿಕೊಳ್ಳಿ: ಕೃಷ್ಣಮೂರ್ತಿ
ಕ.ಪ್ರ. ವಾರ್ತೆ ್ಣ ಹಾಸನ ್ಣ ಮಾ.12
ಕುವೆಂಪು ಅವರ ವೈಚಾರಿಕ ಸಂಗತಿಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಡಾ.ಕೃಷ್ಣಮೂರ್ತಿ ಹನೂರು ತಿಳಿಸಿದರು.
ನಗರದ ಎನ್ಡಿಆರ್ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಾರಾಯಣ ಡಿ.ಆರ್. ಕರೀಗೌಡರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲೇಜು ಸಂಸ್ಥಾಪಕರು ಶಿಕ್ಷಣ ಸಂಸ್ಥೆಗಳನ್ನು ಉನ್ನತ ಆದರ್ಶ ಹಾಗೂ ಉದ್ದೇಶಗಳನ್ನು ಇಟ್ಟುಕೊಂಡು ಸ್ಥಾಪಿಸಿದ್ದಾರೆ. ವಿದ್ಯಾರ್ಥಿಗಳು ಅವುಗಳನ್ನು ಸಾಕಾರಗೊಳಿಸಬೇಕು ಎಂದರು.
ಕಲೆ, ವಾಸ್ತುಶಿಲ್ಪ, ಸಾಹಿತ್ಯ, ಜನಸಾಮಾನ್ಯರ ಸಂಸ್ಕೃತಿ ಎಲ್ಲದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಇರಬೇಕು. ಆಗ ಪರಿಪೂರ್ಣವಾದ ಸಮಾಜ ಕಟ್ಟಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಶಾಮಭಟ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚೆಚ್ಚು ಕೃತಿಗಳನ್ನು ಓದಿ ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು.
ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು. ಹಾಸನ ಬಾಬು ಜನಪದ ಗೀತೆಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

