ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ ಆರಂಭವಾಗಿದ್ದು, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆದರು. ಮೊದಲ ದಿನ ಇತಿಹಾಸ ಮತ್ತು ಗಣಕ ವಿಜ್ಞಾನ ಪರೀಕ್ಷೆಗಳು ಬೆಳಗ್ಗೆ 9 ರಿಂದ ಮಧ್ಯಾಹ್ನ 12.15 ರವರೆಗೆ ಮೈಸೂರು ನಗರದಲ್ಲಿ 24 ಹಾಗೂ ತಾಲೂಕು ಕೇಂದ್ರಗಳಲ್ಲಿ 20 ಸೇರಿದಂತೆ ಒಟ್ಟು 44 ಪರೀಕ್ಷಾ ಕೇಂದ್ರಗಳಲ್ಲಿ ನಡೆದವು. ಮೊದಲ ದಿನ ಯಾವುದೇ ಡಿಬಾರ್ ಆಗಿಲ್ಲ. ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ಬರೆದಿದ್ದಾರೆ ಎಂದು ಡಿಡಿಪಿಯು ಕೆ.ಎಂ. ಪುಟ್ಟು ತಿಳಿಸಿದ್ದಾರೆ. ಮಾ.14 ರಂದು ಜೀವಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ಪರೀಕ್ಷೆ ನಡೆಯಲಿದೆ.
ಶೇಖರ್ ಹಾಸನ ಸಮ್ಮೇಳನಾಧ್ಯಕ್ಷ
ಮೈಸೂರು: ಮಾ.30 ಮತ್ತು 31 ರಂದು ನಡೆಯುವ ಹಾಸನ ಜಿಲ್ಲೆಯ 12ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಮೈಸೂರು ವಿವಿ ಪ್ರಾಧ್ಯಾಪಕ ಹಾಗೂ ಕವಿ ಡಾ.ಎಂ.ಎಸ್. ಶೇಖರ್ ಆಯ್ಕೆಯಾಗಿದ್ದಾರೆ. ಶೇಖರ್ ಅವರು ಪ್ರಸ್ತುತ ಮಂಡ್ಯ ತೂಬಿನಕೆರೆ ಸರ್.ಎಂ.ವಿ. ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಹಾಸನದ ಕಸಾಪ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶೇಖರ್ ಅವರನ್ನು ಆಯ್ಕೆ ಮಾಡಲಾಯಿತು. ಶೇಖರ್ ಅವರು ಸಾಹಿತ್ಯ ಸೇವೆಯನ್ನು ಗುರುತಿಸಿ ಸಭೆಯು ಸರ್ವಾನುಮತದಿಂದ ಆಯ್ಕೆ ಮಾಡಿದೆ.
ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಸಾವು
ಮೈಸೂರು: ಮೈಸೂರು ರೈಲು ನಿಲ್ದಾಣದ 2ನೇ ಫ್ಲಾಟ್ಫಾರಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಚಹರೆ- 45 ವರ್ಷ, 5.4 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು-ಬಿಳಿ ಮಿಶ್ರಿತ ಕೂದಲಿದ್ದು, ಕುರುಚಲು ಗಡ್ಡ ಮೀಸೆ ಬಿಟ್ಟಿದ್ದಾರೆ. ಬಲಗಾಲಿನ ಮಂಡಿಯಿಂದ ಕೆಳಗಿನ ಪಾದದವರೆಗೆ ಗ್ಯಾಂಗ್ರಿನ್ ಆದಂತೆ ಕಂಡುಬಂದಿದ್ದು, ಪಾದಕ್ಕೆ ಬ್ಯಾಂಡೇಜ್ ಸುತ್ತಿರುತ್ತದೆ. ಕಪ್ಪು- ಬಿಳಿ ಬಣ್ಣದ ಚೌಕಳಿಗಳುಳ್ಳ ತುಂಬು ತೋಳಿನ ಶರ್ಟ್, ನೀಲಿ ಬಣ್ಣದ ನಿಕ್ಕರ್, ಸೊಂಟದಲ್ಲಿ ಒಂದು ಬಿಳಿ ಉಡದಾರ ಇದೆ. ಮೃತದೇಹವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಇಡಲಾಗಿದೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2516579 ಸಂಪರ್ಕಿಸಲು ಮೈಸೂರು ರೇಲ್ವೆ ಠಾಣೆ ಪೊಲೀಸರು ಕೋರಿದ್ದಾರೆ.
ಸರಣಿ ಅಪಘಾತ: ಮೂವರಿಗೆ ಗಾಯ
ಮೈಸೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಹುಣಸೂರು ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಐಶ್ವರ್ಯ ಪೆಟ್ರೋಲ್ ಬಂಕ್ ಸಿಗ್ನಲ್ ಜಂಕ್ಷನ್ನಲ್ಲಿ ನಿಂತಿದ್ದ 4-5 ವಾಹನಗಳಿಗೆ ಡಿಕ್ಕಿಯಾಗಿದೆ. 1 ಟೆಂಪೋ, 2 ದ್ವಿಚಕ್ರವಾಹನ ಮತ್ತು 1 ಕಾರು ಜಖಂಗೊಂಡಿದೆ. ಇತರೆ ವಾಹನಗಳಿಗೆ ಸಣ್ಣಪುಟ್ಟ ಹಾನಿ ಉಂಟಾಗಿದೆ. ದ್ವಿಚಕ್ರವಾಹನ ಸವಾರರಾದ ಅಮೃತವರ್ಷಿನಿ, ದಿವ್ಯ ಮತ್ತು ಟೆಂಪೋ ಚಾಲಕ (ಹೆಸರು ತಿಳಿದು ಬಂದಿಲ್ಲ) ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ಚಾಲಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕದ್ದ ಬೈಕ್ ವಶ: ಆರೋಪಿ ಬಂಧನ
ಮೈಸೂರು: ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಸರಸ್ವತಿಪುರಂ ಠಾಣೆ ಪೊಲೀಸರು ಬಂಧಿಸಿ, 2 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಎಚ್.ಡಿ. ಕೋಟೆ ತಾಲೂಕು ಹಳ್ಳದಮನುಗನಹಳ್ಳಿ ನಿವಾಸಿ ಕೆಂಜಗೇಗೌಡ ಎಂಬವರ ಪುತ್ರ ಮಹದೇವಸ್ವಾಮಿ (28) ಬಂಧಿತ ಆರೋಪಿ. ಬಂಧಿತನಿಂದ ಸರಸ್ವತಿಪುರಂ ಮತ್ತು ಲಕ್ಷ್ಮಿಪುರಂ ಠಾಣೆಯ ತಲಾ 1 ಪ್ರಕರಣಗಳು ಪತ್ತೆಯಾಗಿವೆ ಎಂದು ಕೆ.ಆರ್. ಉಪ ವಿಭಾಗದ ಎಸಿಪಿ ಎ.ಎನ್. ಪ್ರಕಾಶ್ಗೌಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

