ಹಾಸನ: ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ಶಾಂತಿಯುತವಾಗಿ ನಡೆದಿದ್ದು, ಮೊದಲ ದಿನವಾದ ಬುಧವಾರ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡು ಪರೀಕ್ಷೆಗೆ ಕುಳಿತಿದ್ದ ಬಿ.ಎಚ್. ಧರಣಿ ಎಂಬ ವಿದ್ಯಾರ್ಥಿ ನಕಲು ಮಾಡಿದ್ದು ದೃಢಪಟ್ಟಿದ್ದು, ಈ ವಿದ್ಯಾರ್ಥಿಯನ್ನು ಡಿಬಾರ್ ಮಾಡಿರುವುದಾಗಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಅಬ್ದುಲ್ ಜಾವೀದ್ ತಿಳಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎನ್.ರಾಜಮ್ಮ ಮಾಹಿತಿ ನೀಡಿದ್ದಾರೆ.