ರು. 160 ಕೋಟಿ ವೆಚ್ಚದಲ್ಲಿ 3 ಸೇತುವೆ

Updated on: 

ಕನ್ನಡಪ್ರಭವಾರ್ತೆ೤ ಹಾಸನ೤ ಮಾ 14
ಬೆಂಗಳೂರು-ಹಾಸನ ಮಾರ್ಗದ ಬೆಳ್ಳೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಈ ಮಾರ್ಗದಲ್ಲಿ ಮೂರು ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಮಾತುಕತೆ ನಡೆದಿದ್ದು, ಈ ವರ್ಷದಲ್ಲಿಯೇ ಈ ಕಾಮಗಾರಿ ಪೂರ್ಣಗೊಳಿಸುವಂತೆ ದೇವೇಗೌಡರು ಒತ್ತಾಯಿಸಿದ್ದಾರೆ ಎಂದು ಜೆಡಿಎಲ್‌ಪಿ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹಾಸನ-ಬೆಂಗಳೂರು ಮಾರ್ಗ ಅರ್ಧಕ್ಕೆ ನಿಂತಿತ್ತದ್ದರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಲೋಕಸಭೆಯಲ್ಲಿ ಹಾಗೂ ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚಿಸಿದ್ದು, ಈ ಮಾರ್ಗದಲ್ಲಿ ಮೂರು ಸೇತುವೆಗಳ ನಿರ್ಮಾಣಕ್ಕೆ 160 ಕೋಟಿ ರು. ನೀಡಲು ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಈ ವರ್ಷಕ್ಕೆ 80 ಕೋಟಿ:   ಈ ವರ್ಷಕ್ಕೆ 80 ಕೋಟಿ ರು. ಕೊಟ್ಟಿದ್ದಾರೆ. ಮತ್ತೊಂದು ಮೈಸೂರಿಂದ ಅರಸೀಕೆರೆಯವರೆಗೆ ಪುಷ್‌ಫುಲ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವರು ಒಪ್ಪಿಕೊಂಡಿದ್ದು, ಕೂಡಲೇ ರೈಲು ಸಂಚರಿಸಲಿದೆ ಎಂದರು.
ಗುಪ್ತ ಸಮಾಲೋಚನೆ ನಡೆಸಿಲ್ಲ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜೊತೆ ಯಾವುದೇ ರೀತಿಯ ಗುಪ್ತ ಸಮಾಲೋಚನೆ ನಡೆಸಿಲ್ಲ ಎಂದು  ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಗೆ ಬರಬೇಕಾದ ಬಾಕಿ ಅನುದಾನ ನೀಡುವಂತೆ ಒತ್ತಾಯಿಸಲು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಹೋಗಿದ್ದೇ. ಆದರೆ ಮುಖ್ಯಮಂತ್ರಿ ಸಿಗದ ಕಾರಣ ಅವರ ಮುಖ್ಯಕಾರ್ಯದರ್ಶಿಯವರನ್ನು ಭೇಟಿ ಮಾಡಿ ಜಿಲ್ಲೆಗೆ ಅನುದಾನ ನೀಡುವಂತೆ ಒತ್ತಾಯಿಸಿದ್ದೇನೆ. ಇದನ್ನು ಬಿಟ್ಟು ಬೇರೆ ಯಾವುದೇ ರೀತಿಯ ಮುಕ್ತ ಸಮಾಲೋಜನೆ ನಡೆಸಿಲ್ಲ ಎಂದರು. ಯಾವುದೇ ರೀತಿಯ ಡಿನೋಟಿಫಿಕೇಷನ್ ಮಾಡಿಕೊಡುವಂತೆ ಕೇಳಲು ಮುಖ್ಯಮಂತ್ರಿಗಳ ಬಳಿ ತೆರಳಿರಲಿಲ್ಲ. ನಾನು ಮತ್ತು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಜಿಲ್ಲೆಗೆ ಬರಬೇಕಾದ ಅನುದಾನಗಳು ಹಾಗೂ ಅರಸೀಕೆರೆ ತಾಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ತೆರಳಿದ್ದೇವು ಎಂದ ಅವರು, ಹೇಮಾವತಿಯಿಂದ ಅರಸೀಕೆರೆ ತಾಲೂಕಿನ 450 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸುವಂತೆ 150 ಕೋಟಿ ರು.ವೆಚ್ಚದಲ್ಲಿ ಯೋಜನೆ ತಯಾರಾಗಿದ್ದು, ಕೂಡಲೆ ಕೆಲಸ ಪ್ರಾರಂಭವಾಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 400 ನಿಂದ 500 ಅಡಿಗಳಷ್ಟು ಭೂಮಿ ಕೊರೆದರೂ ನೀರು ಲಭ್ಯವಾಗುತ್ತಿಲ್ಲ. ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಆದ್ದರಿಂದ ಕಡೇ ಪಕ್ಷ ಪ್ರತಿ ತಾಲೂಕಿಗೆ ಕುಡಿಯುವ ನೀರಿಗೆ 2 ಕೋಟಿ ರು. ನೀಡಬೇಕು ಎಂದ ಅವರು, ಬಾಗೂರು, ದಂಡಿಗನಹಳ್ಳಿ ಸೇರಿದಂತೆ ಇತರೆ ಕಡೆಗಳಲ್ಲಿ ಕುಡಿಯುವ ನೀರಿನ ಯೋಜನೆ ತಯಾರಾಗಿದೆ. ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲದ ಕಾರಣ ಕೆಲಸಗಳು ಮಾಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಹಣನ್ನು ನೀಡಬೇಕು ಮತ್ತು ರಾಜ್ಯ ಸರ್ಕಾರ ಹಣ ನೀಡುವಂತೆ ಒತ್ತಾಯ ಮಾಡಬೇಕು ಎಂದರು.  
ಜೆಡಿಎಸ್ ಏಕಾಂಗಿ ಸ್ಪರ್ಧೆ: ಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಯಾವುದೇ ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದ್ದು, ರಾಷ್ಟ್ರೀಯ ಪಕ್ಷಗಳಿಗೆ ಸ್ಪರ್ಧೆ ನೀಡಲಿದೆ ಎಂದ ಅವರು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕೆಲವು ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದನ್ನು ಜಿಲ್ಲಾಧ್ಯಕ್ಷರು ಹಾಗೂ ಅಯಾ ಕ್ಷೇತ್ರದ ಶಾಸಕರು ನಿರ್ಧರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕೆಲವು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಸಾಧ್ಯವಾಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅವರಾಗಿಯೇ ಪಕ್ಷಕ್ಕೆ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದ ಅವರು, ಅರಸೀಕೆರೆ ಸ್ಥಳೀಯ ಸಂಸ್ಥೆಯಲ್ಲಿ ಅತಂತ್ರ ಸ್ಥಿತಿಯಲ್ಲಿದ್ದು, ಅಧಿಕಾರ ಹಿಡಿಯಲು ಜಿಲ್ಲಾಧ್ಯಕ್ಷರು ಹಾಗೂ ಅ ಕ್ಷೇತ್ರದ ಶಾಸಕರು ಯಾರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು.
ಇನ್ನೂ ಆಲೂರಿನಲ್ಲಿ ಇರುವಂತಹ ಕಡಿಮೆ ಮತದಾರರಿಗೆ ಕೆಜೆಪಿಯವರು ಒಬ್ಬ್ಬೊರಿಗೆ 5 ಸಾವಿರ ರು.ನಂತೆ ಪ್ರತಿ ಮತದಾರರಿಗೆ ಹಣ ನೀಡಿದ್ದಾರೆ. ಮತ್ತೆ ಕೆಲವು ಕಡೆಗಳಲ್ಲಿ 300 ರಿಂದ 400 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾರತೀಯ ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ ಹಾಗೂ ಜಿಲ್ಲಾಧಿಕಾರಿಗೂ ತಿಳಿಸಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಿಳಿಸಿಲಾಗಿದೆ ಎಂದರು. ಮುಖಂಡ ಕೆ.ಎಂ.ರಾಜೇಗೌಡ ಇದ್ದರು.


ಬೆಂಗಳೂರು-ಹಾಸನ ಮಾರ್ಗದ ಬೆಳ್ಳೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಈ ಮಾರ್ಗದಲ್ಲಿ ಮೂರು ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಮಾತುಕತೆ ನಡೆದಿದೆ
ಟಿ  ರೇವಣ್ಣ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com