ಕಾಶ್ಮೀರದಲ್ಲಿ ಉಗ್ರರ ಕೃತ್ಯ: ತಾಲೂಕು ವಿಎಚ್ಪಿ, ಬಜರಂಗದಳ ಖಂಡನೆ
ಕನ್ನಡಪ್ರಭವಾರ್ತೆ ಸಕಲೇಶಪುರ ಮಾ.15
ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಉಗ್ರರ ಕೃತ್ಯವನ್ನು ಖಂಡಿಸಿ ತಾಲೂಕು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಬಜರಂಗದಳ ವಿದ್ಯಾರ್ಥಿ ಪ್ರಮುಖ್ ಕಾರ್ತೀಕ್ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರರ ಕೃತ್ಯ ಅತಿ ಹೇಯವಾಗಿದ್ದು, ಉಗ್ರ ಅಫಜಲ್ ಗುರುವನ್ನು ಗಲ್ಲಿಗೇರಿಸಿದ್ದಕ್ಕಾಗಿ ಪ್ರತೀಕಾರವಾಗಿ ಕಾಶ್ಮೀರದಲ್ಲಿ ಉಗ್ರರು ಗುಂಡಿನ ಮಳೆ ಸುರಿಸುವ ಮೂಲಕ 5 ಮುಗ್ಧ ಜೀವಗಳನ್ನು ಬಲಿ ತೆಗೆದುಕೊಂಡಿದ್ದಾರೆ. ಇದು ಖಂಡನೀಯ
ಎಂದು ಹೇಳಿ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಕೊಳ್ಳಬೇಕು ಎಂದು ಒತ್ತಾಯಿಸಿದರು.
ಇಂಡಿಯನ್ ಮುಜಾಹಿದ್ದೀನ್, ಲಷ್ಕರ್ ಸಂಘಟನೆಗಳು ಈ ಕೃತ್ಯ ಮಾಡಿದ್ದು, ಈ ಸಂಘಟನೆಗಳ ಕಾರ್ಯಕರ್ತರ ಬಗ್ಗೆ ಎಲ್ಲಾ ದೇಶ ಭಕ್ತರು ಎಚ್ಚರಿಕೆಯಿಂದ ಇರಬೇಕೆಂದು ಅವರು ಹೇಳಿದರು.
ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿದ್ದು ತಕ್ಷಣ ಸರ್ಕಾರ ಇದರ ವಿರುದ್ಧ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು ಎಂದು ಅವರು ಹೇಳಿದರು. ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಭಯೋತ್ಪಾದಕರ ಪರ ಆಡಳಿತ ನಡೆಸುತ್ತಿರುವುದು ಸಾಬೀತಾಗಿರುವುದರಿಂದ ಕೇಂದ್ರ ಸರ್ಕಾರ ತಕ್ಷಣ ಜಮ್ಮು ಮತು ಕಾಶ್ಮೀರದ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಉಪವಿಭಾಗಾಧಿಕಾರಿಗಳಿಗೆ ಮನವಿಪತ್ರ ನೀಡಿದರು. ಸಂಘಟನೆಯ ಪ್ರಮುಖ ವಿಜಯಕುಮಾರ್, ಧರ್ಮೇಶ್, ಕಾರ್ತಿಕ್, ದೀಪಕ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

