ಹಾಸನ

'ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ'

Published On :

ರಾಮನಾಥಪುರ: ಕಾಂಗ್ರೆಸ್  ಸಿದ್ಧಾಂತಗಳಿಗೆ ಹುರುಪು ನೀಡಿ ಯುವ ಶಕ್ತಿ ಹಾಗೂ ಜನಶಕ್ತಿಯನ್ನು ಸಂಘಟಿಸುವ ಉದ್ದೇಶದಿಂದ ಕಾರ್ಯಕರ್ತರೆಲ್ಲರೂ ಒಗ್ಗಟಾಗಿ ಶ್ರಮಿಸುವಂತೆ ಕಾಂಗ್ರೆಸ್ ಮುಖಂಡ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪುಟ್ಟಸ್ವಾಮಿ ಮನವಿ ಮಾಡಿದರು.
 ದೊಡ್ಡಮಗ್ಗೆ  ಹೋಬಳಿಯ ರಂಗಾಪುರ ಯಲಗತವಳ್ಳಿ , ಮರಿತಮ್ಮನಹಳ್ಳಿ, ಪಿ.ಚಾಕನಹಳ್ಳಿ, ದೇವಿಪುರ ಮುಂತಾದ ಗ್ರಾಮಗಳಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ ಎಂಬ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
 ಜಿಲ್ಲೆಯಲ್ಲೆ ಅರಕಲಗೂಡು ಕ್ಷೇತ್ರದಲ್ಲಿ ಹಿಂದುಳಿದವರು ಜಾಸ್ತಿ ಇದ್ದಾರೆ. ಇಲ್ಲಿಯವರೆವಿಗೆ ಅರಕಲಗೂಡು ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಹಿಂದುಳಿದವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಆದ್ದರಿಂದ ನಾನು ಸಹ ಹಿಂದುಳಿದವನಾಗಿ ರಾಜ್ಯದಲ್ಲಿ ನಾನಾ ಕಡೆಗಳಲ್ಲಿ ಸರ್ಕಾರಿ ಕೆಲಸ ಮಾಡಿದ್ದು ಮುಂಬರುವ ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಹಾಗೂ ಸಮಾಲೋಚನಾ ಸಭೆಗಳನ್ನು ಹಮ್ಮಿಕೊಂಡು ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಿರುವುದಾಗಿ ತಿಳಿಸಿದರು.
ತಾಲೂಕು ವೀರಶೈವ ಮುಖಂಡ ಹಾಗೂ ಸಮಾಜ ಸೇವಕ ಗಂಗೂರು ಚನ್ನವೀರಯ್ಯ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಎಚ್.ಎಂ. ರಂಗೇಗೌಡ, ಗ್ರಾಮದ ಮುಖಂಡ ಬಾಲರಾಜು ಮಂಜೇಗೌಡ,ವೈ.ಕೆ. ಸ್ವಾಮೀಗೌಡ, ವೈ.ಎ. ಮಂಜು, ವೈ.ಎಸ್. ಪ್ರಕಾಶ್, ಶಿವಣ್ಣ, ಚಂದೇಗೌಡ, ಸುಬ್ಬೇಗೌಡ, ವೈಎಸ್. ರಘು ಇದ್ದರು.
ಮಹಿಳಾ ದಿನಾಚರಣೆ
ಹಾಸನ: ಮಹಿಳೆಯರ ಸಬಲೀಕರಣ ಹುಟ್ಟಿನಿಂದಲೇ ಆಗಬೇಕು, ಇದಕ್ಕೆ ಪುರುಷರು ಪ್ರೋತ್ಸಾಹಿಸಬೇಕು ಎಂದು ಎಸ್‌ಐ ಎ.ಟಿ. ಭಾನು ಅಭಿಪ್ರಾಯಪಟ್ಟರು.
 ನಗರದ ಸರ್ಕಾರಿ ಕಲಾ ಕಾಲೇಜಿನ, ಸ್ನಾತಕೋತ್ತರ ಅಧ್ಯಯನ ಕೇಂದ್ರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹೆಚ್ಚಾಗಿದ್ದು, ಇದನ್ನು ತಡೆಯುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಪುರುಷರು ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ದೌರ್ಜನ್ಯಗಳನ್ನು ತಡೆಯಬಹುದು ಎಂದು ತಿಳಿಸಿದರು.
 ಶಿಕ್ಷಣದಿಂದ ಮಾತ್ರ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಆದರಿಂದ ಪ್ರತಿಯೊಬ್ಬ ಹೆಣ್ಣುಮಕ್ಕಳು ಶಿಕ್ಷಣವಂತರಾಗಿ ಆರ್ಥಿಕ ಸ್ವಾವಲಂಬಿತ ರಾಗುವಂತೆ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.