ಹಾಸನ

'ಮಹಿಳೆಯರ ಸಾಧನೆಗೆ ಪುರುಷರ ಸಾಂಗತ್ಯ ಅಗತ್ಯ'

Published On :

ಕನ್ನಡಪ್ರಭವಾರ್ತೆ೤ ಹಾಸನ೤ ಮಾ. 15
ಮಹಿಳೆಯರ ಸಾಧನೆಗೆ ಪುರುಷರ ಸಹಕಾರ ಅತ್ಯಗತ್ಯ ಎಂದು ನಗರದ ಎವಿಕೆ ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಶೈಲಜಾ ಕಾರ್ಕಡ್ ಹೇಳಿದರು. ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಹೆಣ್ಣು ಮಕ್ಕಳು ಹಿಂಜರಿಕೆಯ ಮನೋಭಾವ ಬಿಟ್ಟು, ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕಿದೆ.
  ದೇಶದ ಸ್ವಾತಂತ್ರ್ಯಕ್ಕೆ ಹಾಗೂ ಸಮಾಜ ಸೇವೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವವದ್ದಾಗಿದೆ ಎಂದರು. ವಿದ್ಯಾರ್ಥಿನಿಯರು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಆತ್ಮಸ್ಥೈರ್ಯ ಹಾಗೂ ಸಾಧಿಸುವ ಛಲ ಮೈಗೂಡಿಸಿಕೊಳ್ಳುವ ಮೂಲಕ ಸಾಧನೆಯ ಹಾದಿ ಕಂಡುಕೊಳ್ಳಬೇಕು  ಎಂದು ನುಡಿದರು.
 ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ ಮಾತನಾಡಿ, ಮಹಿಳೆಯರು ಹಲವು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಪುರುಷರಿಗೆ ಸಮಾನವಾಗಿ ನಿಲ್ಲುವ ಶಕ್ತಿ ಮತ್ತು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಅವಧಿಯಲ್ಲಿ ಉತ್ತಮ ಶಿಕ್ಷಣ ಪಡೆದುಕೊಳ್ಳುವ ಮೂಲಕ ತಮ್ಮ ಪೋಷಕರಿಗೆ ಹಾಗೂ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಬೇಕು  ಎಂದು ಹೇಳಿದರು.
 ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮೋಹನ್‌ಕುಮಾರ್, ಪ್ರಾಧ್ಯಾಪಕ ಡಾ. ಶಶಿ ಕುಮಾರ್, ಪ್ರೊ. ಪೂರ್ಣಿಮ, ಪ್ರೊ. ಆಶಾ, ಡಾ. ಕೆ.ಜಿ. ಕವಿತಾ, ಡಾ. ಯಶೋಧ ಹಾಗೂ ಪ್ರೊ. ಸುಲೋಚನಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.