ಉಪನ್ಯಾಸಕರು ಹೊಸದನ್ನು ಅರಿಯಿರಿ

Updated on: 

ಕ.ಪ್ರ.ವಾರ್ತೆ ಟಿ ಹಾಸನ ಟಿ  ಮಾ.17
ಉಪನ್ಯಾಸಕರು ಹೊಸ ಹೊಸ ವಿಚಾರಗಳ ಬಗ್ಗೆ ಅರಿವು ಪಡೆಯಬೇಕೆಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ  ಟಿ.ಎನ್. ಪ್ರಭಾಕರ್ ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ 2 ದಿನಗಳ ರಾಸಾಯಿನಿಕ ಜೀವವಿಜ್ಞಾನದಲ್ಲಿ ಇತ್ತೀಚಿನ ಬೆಳವಣಿಗೆಗಳು-ಒಂದು ಅವಲೋಕನ ಎಂಬ ವಿಷಯದ ಬಗ್ಗೆ ನಡೆದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ  ಅವರು ಮಾತನಾಡಿ, ಇಂತಹ ಸೆಮಿನಾರ್ಗಳು ಹೆಚ್ಚು ನಡೆದರೆ ಉಪನ್ಯಾಸಕರು ಮತ್ತು ಪ್ರತಿನಿಧಿಗಳಿಗೆ ಅನುಕೂಲವಾಗಲಿದೆ ಎಂದರು. ಯುಜಿಸಿ ಹಣ ಗಳಿಸುವುದನ್ನು ಬಿಟ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಸೆಮಿನಾರ್ಗಳಲ್ಲಿ ಭಾಗವಹಿಸಿದ ಪ್ರತಿನಿಧಿಗಳು ತಮ್ಮಲ್ಲೇ ಅದು ಕೊನೆ ಮಾಡದೆ ಕಾಲೇಜಿಗೆ ಹೋಗಿ ಇತರರಿಗೂ ತಿಳಿಸುವಂತಹ ಕಾರ್ಯ ಮಾಡಬೇಕೆಂದು ಕಿವಿಮಾತು ಹೇಳಿದರು.
ಉಪನ್ಯಾಸಕರು ಹೆಚ್ಚು ಹೆಚ್ಚು ಪ್ರವಾಸ ಮಾಡಿ ಹೊಸ ಅನುಭವ ಪಡೆದು ಹೆಚ್ಚಿನ ವಿಷಯ ತಿಳಿದುಕೊಳ್ಳಬೇಕು. ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದರಿಂದ ಮತ್ತಷ್ಟು ಜ್ಞಾನ ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪುಸ್ತಕವನ್ನು ಶಾಸಕ ಎಚ್.ಎಸ್. ಪ್ರಕಾಶ್ ಬಿಡುಗಡೆಗೊಳಿಸಿ, ಇಂದಿನ ಸಮುದಾಯವು ವೈಜ್ಞಾನಿಕವಾಗಿ ಮುಂದುವರೆದರೂ ಪ್ರಕೃತಿಯಲ್ಲಿ ತಪ್ಪು ಕಾಣುತ್ತಿದ್ದೇವೆ ಎಂದು ಹೇಳಿದರು.  ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಎ.ಎಲ್. ಮುರಳೀಧರ್,  ಸ್ನಾತಕೋತ್ತರ ವಿಭಾಗದ ಸಂಯೋಜಕರು ಡಾ. ಶಂಕರೆಗೌಡ, ರಸಾಯನಶಾಸ್ತ್ರ ವಿಭಾಗದ ಡಾ. ಬೂಲ್ರೆಹಮನ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com