ನಿರೀಕ್ಷೆ ಮೀರಿ ಮಹಿಳೆ ಸಾಧನೆ
ಆಲೂರು: ಅನೇಕ ಅಡ್ಡಿ ಆತಂಕಗಳ ನಡುವೆಯೂ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ನಿರೀಕ್ಷೆ ಮೀರಿ ಸಾಧನೆ ಮಾಡುತ್ತಿದ್ದಾರೆ ಎಂದು ಸ್ತ್ರೀಶಕ್ತಿ ಸಂಘದ ಕಾರ್ಯದರ್ಶಿ ಶೈಲಜಾ ಅಭಿಪ್ರಾಯಪಟ್ಟರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಇತ್ತೀಚೆಗೆ ಹರ್ಷಿತ ಆಲೂರು ಯೋಜನೆ, ಐಸಿಐಸಿಐ ಬ್ಯಾಂಕ್ ಮತ್ತು 9 ವಿವಿಧ ಸಂಘ ಸಂಸ್ಥೆಗಳು ಹಾಗೂ ಸ್ತ್ರೀ ಶಕ್ತಿ ಸ್ವಸಹಾಯಕ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತಾಡಿದರು. ಹರ್ಷಿತ ಆಲೂರು ಯೋಜನೆ ಅಧ್ಯಕ್ಷ ನಂಜಪ್ಪಶೆಟ್ಟರು ಮಾತನಾಡಿ, ಜಗತ್ತಿನ ಪ್ರತಿಯೊಂದು ದೇಶದಲ್ಲೂ ಜರುಗಿದ ಲಿಂಗ ಅಸಮಾನತೆಯ ವಿರುದ್ಧದ ಹೋರಾಟದ ಫಲವಾಗಿ ಮಾ.8 ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾ ಚರಣೆಯನ್ನು ಆಚರಿಸಲಾಗುತ್ತಿದೆ. ಸ್ವಸಹಾಯ ಸಂಘಗಳ ಪ್ರತಿನಿಧಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ ಆರ್ಥಿಕವಾಗಿ ಮುನ್ನಡೆ ಸಾಧಿಸಬೇಕಾಗಿದೆ ಎಂದರು. ಅಂಗವಿಕಲ ಮಕ್ಕಳ ಸಂಯೋಜಕ ಜಾಕೀರ್ ಹುಸೇನ್ ಮತ್ತು ಬಲರಾಮ್ ಮಾತಾಡಿದರು. ಅಧ್ಯಕ್ಷತೆಯನ್ನು ಹರ್ಷಿತ ಸಂಸ್ಥೆಯ ನಿರ್ದೇಶಕ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಾಲಕ್ಷ್ಮಿ ಸ್ವಸಹಾಯ ಸಂಘ ಪ್ರತಿನಿಧಿಗಳಾದ ಶಾರದಮ್ಮ, ರೇಣುಕ ನೆರವೇರಿಸಿದರು. ಅನ್ನಪೂರ ೇಶ್ವರಿ ಪ್ರತಿನಿಧಿ ಲತಾ ಸ್ವಾಗತಿಸಿದರು. ಬಲರಾಮ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

