ಸಾಲದ ಅವಮಾನದಿಂದ ರೈತ ಆತ್ಮಹತ್ಯೆ: ಮಂಜು
ಕ.ಪ್ರ.ವಾರ್ತೆ ಅರಕಲಗೂಡು ಮಾ.17
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಸಾಲದ ಹೊರೆಗೆ ಹೆದರಿ ಅಲ್ಲ, ಸಾಲ ತೆಗೆದುಕೊಂಡ ನಂತರ ಎದುರಾಗುವ ಅವಮಾನಗಳಿಂದಾಗಿ ಎಂದು ಶಾಸಕ ಎ. ಮಂಜು ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆರಂಭಿಸಿರುವ ಬೈಚನಹಳ್ಳಿ ವಲಯ ವಿಭಾಗದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ದುಡಿಯಲು ಸಮರ್ಥರಿದ್ದಾರೆ. ಆದರೆ ಪ್ರಕೃತಿಯ ಮೇಲಾಟದಲ್ಲಿ ಕುಸಿದಿದ್ದಾನೆ. ತೆಗೆದುಕೊಂಡ ಸಾಲ ತೀರಿಸಲು ಸಮರ್ಥನಿದ್ದರೂ ಪರಿಸ್ಥಿತಿಯ ಕೈಗೊಂಬೆಯಾಗಿದ್ದಾನೆ. ಇಂತಹ ಸಂದರ್ಭಗಳಲ್ಲಿ ಮನೆಯಲ್ಲಿ ಮಹಿಳೆಯರು ಧೈರ್ಯ ತುಂಬುವ ಕೆಲಸ ಮಾಡಿದರೆ ರೈತರು ಆತ್ಮಹತ್ಯೆ ತಡೆಗಟ್ಟಬಹುದು ಎಂದು ಹೇಳಿದರು.
ಅಭಿವೃದ್ಧಿ ಸಾಧ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಯೋಜಿಸಿರುವ ಈ ಯೋಜನೆ ಗ್ರಾಮೀಣ ಜನರ ಅಭಿವೃದ್ಧಿಗೇ ವಿನಾ ಮತ್ಯಾವ ಕಾರಣಕ್ಕೂ ಅಲ್ಲ. ಆದ್ದರಿಂದ ಇಂತಹ ಯೋಜನೆಗಳಲ್ಲಿ ಸಕ್ರಿಯರಾಗಿ ತಾವು ಅಭಿವೃದ್ಧಿ ಹೊಂದುವುದರಿಂದ ಸಮಾಜ ಮತ್ತು ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಗ್ರಾಮೀಣ ಪ್ರದೇಶಗಳಲ್ಲೂ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಎಂದ ಅವರು, ಪರಸ್ಪರ ನಂಬಿಕೆಯಿಂದ ಬದುಕುವುದು ಇಂದಿನ ಅಗತ್ಯವಾಗಿದೆ ಎಂದು ನುಡಿದರು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಅರೇಮಾದನಹಳ್ಳಿ ಶ್ರೀ ಮನ್ಮೂಲಮಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮಿಗಳು ಮಾತನಾಡಿ, ಧಾರ್ಮಿಕ ನೆಲೆಗಟ್ಟಿನ ಮೇಲೆ ಕೆಲಸ ಮಾಡುತ್ತಿರುವ ಶ್ರೀ ಕ್ಷೇತ್ರ ಸಾಮಾಜಿಕ ಚಿಂತನೆಯನ್ನಿರಿಸಿ ಆರಂಭಿಸಿರುವ ಈ ಯೋಜನೆ ನಿಜಕ್ಕೂ ಪರಿಣಾಮಕಾರಿಯಾಗಿದೆ.ಧಾರ್ಮಿಕ ನೆಲೆಗಟ್ಟಿನ ಆಧಾರದಿಂದ ಸಂಘಟಿತರಾದಾಗ ಅದು ಕುಟುಂಬದ ಶ್ರೇಯಸ್ಸಿಗೆ ಸಹಕಾರಿಯಾಗಲಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕು ಪತ್ರಕಚರ್ತರ ಸಂಘದ ಅಧ್ಯಕ್ಷ ಎ.ಪಿ. ಶಂಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ಮಾಜಿ ಅಧ್ಯಕ್ಷ ಎಂ.ಎಸ್. ಯೋಗೇಶ್, ಗ್ರಾಮದ ಹಿರಿಯರಾದ ಕೊಲ್ಲಾರಿಗೌಡ, ಯೋಜನೆಯ ಯೋಜನಾಧಿಕಾರಿ ಅಜಿತ್ ಹೆಗ್ಡೆ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಪುಟ್ಟಮ್ಮ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

