ಜೆಡಿಎಸ್ ಪ್ರಾಬಲ್ಯ ಮುರಿಯುವುದು ಸುಲಭವಲ್ಲ
ಹಾಸನ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಪಕ್ಷದ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವುದರಿಂದಲೇ ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯ ಮುರಿಯುವುದು ಸುಲಭದ ಕೆಲಸವಲ್ಲ ಎಂದು ತಾಪಂ ಸದಸ್ಯ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜನರ ಬಗ್ಗೆ ಸದ್ಭಾವನೆ ಸೇವಾ ಮನೋಭಾವ ಮತ್ತು ಅಭಿವೃದ್ಧಿ ಕಾರ್ಯಗಳೇ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ನೆರವಾಯಿತು. ವಿರೋಧ ಪಕ್ಷಗಳು ಎಷ್ಟು ಅಪಪ್ರಚಾರ ಮಾಡಿದರೂ ಅದಕ್ಕೆ ಮತದಾರರು ಕಿವಿಗೊಡಲಿಲ್ಲ. ಅಷ್ಟಕ್ಕೂ ಮಾಜಿ ಸಚಿವ ರೇವಣ್ಣ, ಶಾಸಕ ಎಚ್.ಎಸ್. ಪ್ರಕಾಶ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜವರೇಗೌಡ, ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ, ಇನ್ನಿತರೆ ಮುಖಂಡರು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರ ಸಮಸ್ಯೆಗಳಿಗೆ ತಮ್ಮ ಶಕ್ತಿ ಮೀರಿ ಸ್ಪಂದಿಸಿದ್ದಾರೆ. ಅಗತ್ಯ ಕಾಮಗಾರಿಗಳಿಗೆ ಒತ್ತು ಕೊಟ್ಟು ಮಾಡಿಸಿದ್ದರೆ. ಮತದಾರರು ಸಹ ಅದಕ್ಕೆ ಮನ್ನಣೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

