ಹಾಸನ

'ಶಂಕರ್ ಸೋಲಿಗೆ ಕಾಣದ ಕೈಗಳ ಕೆಲಸ'

Published On :

ಹಾಸನ: ನಗರಸಭೆ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್ ಅವರ ಸೋಲಿಗೆ   ಕಾಣದ ಕೈಗಳು ಕೆಲಸ ಮಾಡಿವೆ ಎಂದು ಎಚ್.ಡಿ. ರೇವಣ್ಣ ಅಭಿಮಾನಿಗಳ ಸಂಘದ  ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಶ್ರೀಧರ್ ಆರೋಪಿಸಿದ್ದಾರೆ. ಶಂಕರ್ ನಗರದ 34ನೇ ವಾರ್ಡಿನಿಂದ ಮೂರು ಬಾರಿ ಗೆದ್ದು, ನಗರಸಭೆ ಅಧ್ಯಕ್ಷರಾಗಿ  ಗುರುತಿಸಿಕೊಂಡಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಅವರ ಸೋಲಿಗೆ  ಕಾಣದ ಕೈಗಳು ಕೆಲಸ ಮಾಡಿವೆ ಎಂದು ದೂರಿದ್ದಾರೆ.
ಎಚ್ಚರಿಕೆ: ಶಂಕರ್ ಉನ್ನತ ಮಟ್ಟದ ರಾಜಕಾರಣವನ್ನು ಕಂಡ ಕೆಲವು ರಾಜಕಾರಣಿಗಳು  ಅವರ ಮೇಲೆ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂಬ ವದಂತಿಗಳು ಚುನಾವಣೆಯ ನಂತರ ಕೇಳಿ ಬರುತ್ತಿವೆ. ನಿಜವಾದ ವಿಚಾರ ಬಯಲಿಗೆ ಬಂದಿದ್ದೇ ಆದರೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಶಂಕರ್ ಅವರ ವರ್ಚಸ್ಸನ್ನು ಹೆಚ್ಚಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹುದ್ದೆಯನ್ನೋ ಅಥವಾ ಜೆಡಿಎಸ್ ರಾಜ್ಯ ಘಟಕದಲ್ಲಿ ಉತ್ತಮ ಹುದ್ದೆಯನ್ನಾದರೂ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.