ಹಾಸನ

ಎಂಎಲ್ಸಿಯಾಗಿ ಶಿವಪ್ಪ: ಕಾರ್ಯಕರ್ತರ ಸಂಭ್ರಮ

Published On :

ಕ.ಪ್ರ ವಾರ್ತೆ ೤ ಹಾಸನ ೤ ಮಾ 19
ಬಿಜೆಪಿ ಹಿರಿಯ ಮುಖಂಡ ಬಿ.ಬಿ.ಶಿವಪ್ಪ ನೂತನ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಸಂಭ್ರಮ ಆಚರಿಸಿದರು.
ನಗರದ ಹೇಮಾವತಿ ಪ್ರತಿಮೆಯ ಬಳಿ ಬಿಜೆಪಿ ಕಾರ್ಯಕರ್ತರು, ಶಿವಪ್ಪನವರ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಶಿವಪ್ಪನವರಿಗೆ ಈಗಲಾದರೂ ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕಾರ್ಯಕರ್ತರು, ಶಿವಪ್ಪನವರ ಪರವಾಗಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು. ಬಿಜೆಪಿ ಮುಖಂಡ ಕಮಲ್‌ಕುಮಾರ್, ಮಂಜುನಾಥ್ ಮೊರೆ, ನಾಗೇಶ್, ಮಂಜುನಾಥ್ ಶರ್ಮಾ ಇತರರು ಇದ್ದರು.     
ವೀರಶೈವ ಸಂಘದಿಂದ:  ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಬಸವೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಸಂಘದ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ವೀರಶೈವ ಸಂಘದ ಮುಖಂಡ ಐಸಾಮಿಗೌಡ, ಕಟ್ಟಾಯ ಶಿವಕುಮಾರ್, ಎಂ.ಕೆ. ಕಮಲಲ್ಕುಮಾರ್, ನಾಗೇಶ್, ಪ್ರಕಾಶ್, ಹೇಮಂತ್‌ಕುಮಾರ್, ಶಿವಬಸಪ್ಪ, ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.