ಸ್ತ್ರೀಶಕ್ತಿ ಸಂಘಗಳಿಂದ ಪ್ರತಿಭಟನೆ ಎಚ್ಚರಿಕೆ
ಹಾಸನ: ಸಕಲೇಶಪುರ ತಾಲೂಕು ಹೆತ್ತೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತೀವ್ರವಾಗಿದ್ದು, ಅನೇಕ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದ್ದು, ಇನ್ನಾದರೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೇ ಪ್ರತಿಭಟನೆ ನಡೆಸಲಾಗುವುದು ಎಂದು ಸ್ತ್ರೀಶಕ್ತಿ ಸಂಘದ ಸದಸ್ಯರು ಎಚ್ಚರಿಸಿದ್ದಾರೆ.
ಸುಮಾರು 5 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಹೆತ್ತೂರು ಹೋಬಳಿಯಲ್ಲಿ ಈ ಹಿಂದೆ ವೈನ್ಶಾಪ್ ಇತ್ತು. ಆದರೆ ಕೆಲ ಕಾರಣದಿಂದ ಅದನ್ನು ಮುಚ್ಚಿಸಲಾಗಿದೆ. ಆದರೆ ಇದೀಗ ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇಲ್ಲಿನ ಕೆಲವರು ದಿನಸಿ ಅಂಗಡಿಯಲ್ಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಅಂತಹ 10ಕ್ಕೂ ಹೆಚ್ಚು ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಜನರಿಂದ ಜನರಿಂದ ಹಣ ಸುಲಿಯುತ್ತಿದ್ದಾರೆ. ಇದರಿಂದ ಕುಟುಂಬಗಳ ನಿರ್ವಹಣೆ ಕೂಡ ಸಾಧ್ಯವಾಗದ ಸ್ಥಿತಿ ಇದ್ದು ಕೆಲ ಕುಟುಂಬಗಳು ಬೀದಿಗೆ ಬೀಳುವ ಸ್ಥಿತಿ ತಲುಪಿದೆ. ಅಲ್ಲದೇ ಅಕ್ರಮ ಮಾರಾಟ ಮಾಡಲು ಮದ್ಯಎಲ್ಲಿಂದ ಹೇಗೆ ತರುತ್ತಾರೆ ಎಂಬ ಬಗ್ಗೆ ಯಾರಿಗೂ ಅರಿವಿರುವುದಿಲ್ಲ. ಈಗಾಗಲೇ ಮದ್ಯ ಕುಡಿದು ಕೆಲವರು ಆಸ್ಪತ್ರೆ ಸೇರಿ ಸಾವಿರಾರು ರು. ಜತೆಗೆ ಆರೋಗ್ಯ ಕಳೆದು ಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಸಭೆ
ಹಾಸನ: ಶ್ರೀಆದಿಚುಂಚನಗಿರಿ ಮಠದ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲಿ ಹೇಗೆ ಇರಲಿ ಮಠದ ಬಗ್ಗೆ ಕಾಳಜಿ ಹೊಂದಿರಲಿ, ಬಡ ವಿದ್ಯಾರ್ಥಿಗಳಿಗೆ ತಮ್ಮ ಕೈಲಾದ ನೆರವನ್ನು ನೀಡಲಿ ಎಂದು ಶಾಸಕ ಎಚ್.ಎಸ್.ಪ್ರಕಾಶ್ ಹೇಳಿದರು. ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಆದಿಚುಂಚನಗಿರಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯಕಾರಿ ಹಾಗೂ ಪದಾಧಿಕಾರಿಗಳ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರಿಂದ ಸ್ಥಾಪಿತವಾದ ಶಿಕ್ಷಣ ಸಂಸ್ಥೆಗಳು ಉತ್ತಮವಾಗಿದ್ದು, ತನ್ನದೇ ಆದ ಛಾಪನ್ನು ಮೂಡಿಸಿವೆ. ಅವುಗಳನ್ನು ಉಳಿಸ ಬೆಳೆಸಬೇಕಾದುದು ಎಲ್ಲರ, ಅದರಲ್ಲಿಯೂ ಬಹುಮುಖ್ಯವಾಗಿ ಹಳೆಯ ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

