ಅರಸೀಕೆರೆ ಪುರಸಭೆ ಕಾಂಗ್ರೆಸ್ ಸದಸ್ಯರಿಗೆ ಸನ್ಮಾನ
ಕ.ಪ್ರವಾರ್ತೆ,ಹಾರನಹಳ್ಳಿ,ಮಾ. 21
ಅರಸೀಕೆರೆ ಪುರಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರಿಗೆ ಸನ್ಮಾನ ಸಮಾರಂಭ ಹಾರ್ನಳ್ಳಿಯಲ್ಲಿ ನಡೆಯಿತು.
ಜಿಲ್ಲಾ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಟೇಲ್ ಶಿವರಾಂ ಮಾತನಾಡಿ, ನಗರ ಪ್ರದೇಶದಲ್ಲಿ ಕಾಂಗ್ರೆಸ್ಗೆಉತ್ತಮ ಫಲಿತಾಂಶ ಬಂದಿದ್ದು ಅರಸೀಕೆರೆ ಕ್ಷೇತ್ರದಲ್ಲಿ ಮಾಜಿ ಸಚಿವ ಶಿವರಾಂ ಸಂಚಾರ ನಡೆಸಿ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದರಿಂದ ಅರಸೀಕೆರೆಯಲ್ಲಿ 11 ಸ್ಥಾನಗಳ ಗೆಲುವಿಗೆ ಸಹಕಾರಿಯಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರ ಕಾಂಗ್ರೆಸ್ ಕೈ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ ಶಿವರಾಂ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿ, ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತದಾರರು ಆಶೀರ್ವಾದ ನೀಡಿದ್ದು ಸದಸ್ಯರು ಜನಪರ ಕಾಳಜಿ ಸಾರ್ವಜನಿಕ ಕೆಲಸಗಳಿಗೆ ಉತ್ತಮವಾಗಿ ಸ್ಪಂದಿಸಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಉತ್ತಮ ಹೆಸರು ಬರಲು ಸಾಧ್ಯವೆಂದು ಹೇಳಿದರು.
ಕಾಂಗ್ರೆಸ್ ಸೇರಿದ ಹಾರ್ನಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕರೀಂಸಾಬ್ ಮಾತನಾಡಿ, ಕಾಂಗ್ರೆಸ್ಗೆ ತನ್ನದೇ ಆದ ಇತಿಹಾಸವಿದೆ. ಶಿವರಾಂ ಅರಸೀಕೆರೆ ಕ್ಷೇತ್ರಕ್ಕೆ ಬಂದ ನಂತರ ಮುಸ್ಲಿಂರು ಕಾಂಗ್ರೆಸ್ ಸೇರುತ್ತಿದ್ದು ಈ ಬಾರಿ ಕಾಂಗ್ರೆಸ್ಗೆ ಉತ್ತಮವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.
ಪುರಸಭೆ ಮಾಜಿ ಸದಸ್ಯ ಅಬ್ದುಲ್ ಹಮೀಜ್ ಮಾತನಾಡಿ, ಶಾಸಕರ ವರ್ತನೆಯಿಂದ ಬೇಸತ್ತು ಕೆಲವು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು ನೀಡುತ್ತಿದ್ದಾರೆಂದು ತಿಳಿಸಿದರು.
ನೂತನ ಪುರಸಭೆ ಸದಸ್ಯ ಬಾಲಮುರುಗನ್, ಮಂಜುಳ, ಗೌರಮ್ಮ, ಗೀತಾ, ಮಾಲಾಬಾಯಿ, ಕಾಂತೇಶ್, ರೇಷ್ಮಾಬಾನು, ರೋಷನ್, ಕೆ.ಕೆ.ನೂರುಲ್ಲಾ ಖಾನ್, ಶಫಿ ಅಹಮದ್, ಗುರುಲಿಂಗಪ್ಪ, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್, ಮುಖಂಡ ಮಲ್ಲೇನಹಳ್ಳಿ ಶಿವಶಂಕರಸ್ವಾಮಿ ಇದ್ದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣಾಯಕನಹಳ್ಳಿ ವಿಜಯಕುಮಾರ್ ಸ್ವಾಗತಿಸಿದರು. ಇದೇ ವೇಳೆ ಅನೇಕ ಮುಸ್ಲಿಂರು ಕಾಂಗ್ರೆಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

