ನಕಲಿ ರಸಗೊಬ್ಬರ ಮಾರಾಟ ಜಾಲ ಪತ್ತೆ
ಕ.ಪ್ರ.ವಾರ್ತೆ ಸಕಲೇಶಪುರ ಮಾ.21
ಯಾವುದೇ ಪರವಾನಗಿ ಇಲ್ಲದೆ, ರೈತರಿಗೆ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಕೃಷಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ.
ಮಂಡ್ಯ ಜಿಲ್ಲೆಯ ನೆಲಮಂಗಲದ ಅನ್ನದಾತ ಗೋಲ್ಡ್ ಅಂಡ್ ಡೈಮಂಡ್ ಬಯೋಟೆಕ್ ಹಾಗೂ ಅನ್ನದಾತ ಅಗ್ರಿ ಗ್ರೀನ್ಟೆಕ್ ಕಂಪೆನಿಗಳು ತಾಲೂಕಿನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಸಾವಯವ ಗೊಬ್ಬರ ಮಾರಾಟ ಮಾಡುತ್ತಿದ್ದವು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಬುಧವಾರ ಬೆಳಗ್ಗೆ ಸಹಾಯಕ ಕೃಷಿ ನಿರ್ದೇಶಕ ಜಿ.ಎಚ್.ಯೋಗೇಶ್, ಕೃಷಿ ಅಧಿಕಾರಿ ಎಚ್.ಶ್ರೀನಿವಾಸ್, ಟಿ.ಜಿ.ಚಲುವರಂಗಪ್ಪ ಹಾಗೂ ಉದೇವಾರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಮಧು ತಾಲೂಕಿನ ಆನೇಮಹಲ್, ಉದೇವಾರ ಗ್ರಾಮಗಳಲ್ಲಿ ದಾಳಿ ನಡೆಸಿ ಎರಡು ಲಾರಿ ಹಾಗೂ 220 ಚೀಲ ನಕಲಿ ಗೊಬ್ಬರವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಗೊಬ್ಬರ ಮಾರಾಟ ಮಾಡುತ್ತಿದ್ದ ಮಂಡ್ಯದ ಬಿ.ಸಿ.ವಿಕಾಸ್, ವಾಹನ ಚಾಲಕ ನಾಗರಾಜು, ಪಾಂಡವಪುರದ ಶಿವಕುಮಾರ್, ವಾಹನ ಚಾಲಕ ಕುಣಿಗಲ್ನ ಕುಮಾರಸ್ವಾಮಿ ಅವರನ್ನು ಬಂಧಿಸಲಾಗಿದೆ.
ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

