ಹಾಸನ

ಶಾಲಾ ಆಟದ ಮೈದಾನ ಒತ್ತುವರಿ ತೆರವುಗೊಳಿಸಿ: ಕರವೇ

Published On :

ಕ.ಪ್ರ ವಾರ್ತೆ ಹಾಸನ ಮಾ.22
ಒತ್ತುವರಿಯಾಗಿರುವ ಹಿರೀಸಾವೆ ಸರ್ಕಾರಿ ಪ್ರಾಥಮಿಕ ಶಾಲೆಯ ಆಟದ ಮೈದಾನವನ್ನು10 ದಿನಗಳ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಗ್ರಹ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಿರೀಸಾವೆ ಘಟಕದ ಅಧ್ಯಕ್ಷ ಎಚ್.ಬಿ.ಮಹೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೀಸಾವೆ ಶ್ರೀಕಂಠಯ್ಯ ವೃತ್ತದಲ್ಲಿ ಬಾಲಕರ ಹಿರಿಯ ಮಾದರಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ ಸೇರಿರುವ ಸರ್ವೇ ನಂ.470.2ಎ ನಲ್ಲಿ 11ಗುಂಟೆ ಮತ್ತು 470.2ಬಿ ನಲ್ಲಿ 4 ಗುಂಟೆ ಜಾಗವಿದ್ದು, ಈಗ ಜಾಗದಲ್ಲಿ ಶಾಲೆಯ ಮಕ್ಕಳ ಆಟದ ಮೈದಾನದ ಜಾಗವನ್ನು ವಕೀಲ ಮಂಜುನಾಥ್ ಪ್ರಸಾದ್ ಹಾಗೂ ಇತರೆ ಕೆಲವು ಒತ್ತುವರಿ ಮಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಮಂಜುನಾಥ್ ಪ್ರಸಾದ್ ಕಳೆದ ಹಲವು ವರ್ಷಗಳ ಹಿಂದೆಯೇ ಸರ್ಕಾರಿ ಪ್ರಾಥಮಿಕ ಶಾಲೆಯ ಈ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಮಾತ್ರವಲ್ಲ, ಒತ್ತುವರಿ ಮಾಡಿರುವ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಶಾಲೆಯ ಜಾಗವಿರುವ ಹಿಂಭಾಗದಲ್ಲಿಯೇ ಮಂಜುನಾಥ್ಗೆ ಸೇರಿದ ಜಾಗವಿದ್ದು, ಅದಕ್ಕೆ ಹೊಂದಿಕೊಂಡಂತೆ ಸರ್ಕಾರಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಸ್ವಂತ ಕಟ್ಟವನ್ನು ನಿರ್ಮಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ದೂರಿದರು.
ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು  ನೀಡಿದರೂ, ಇದುವರೆಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಚನ್ನರಾಯಪಟ್ಟಣದ ತಹಸೀಲ್ದಾರ್ಗೆ ದೂರು ನೀಡಲಾಗಿತ್ತು.ಆದರೆ, ಈಗಾಗಲೇ ಮೂರು ತಹಸೀಲ್ದಾರ್ ವರ್ಗಾವಣೆಯಾಗಿದ್ದಾರೆ. ಅಧಿಕಾರಿಗಳು ಒತ್ತುವರಿ ಮಾಡಿಕೊಂಡಿರುವ ನಿವೇಶದಲ್ಲಿ ನಿರ್ಮಿಸಿರುವ ಕಟ್ಟಡವನ್ನು ತೆರೆವುಗೊಳಿಸುವುದಾಗಿ ಭರವಸೆ ನೀಡಿದ್ದಾರೆಯೇ ಹೊರತು, ಇದುವರೆಗೂ ಅದು ಕಾರ್ಯಗತವಾಗಿಲ್ಲ ಎಂದು ಕಿಡಿಕಾರಿದರು.
ಈ ನಿಟ್ಟಿಮಲ್ಲಿ ಇನ್ನು ಹತ್ತು ದಿನಗಳ ಒಳಗಾಗಿ ಸರ್ಕಾರಿ ಶಾಲೆಯ ಆಟದ ಮೈದಾನ ಒತ್ತುವರಿಯಾಗಿರುವ ಜಾಗದಲ್ಲಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸದಿದ್ದಲ್ಲಿ, ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜಯಣ್ಣ, ಮಂಜುನಾಥ್,ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.