ಹಾಸನ

ಅಪಾಯಕ್ಕೆ ದಾರಿಯಾಗಿರುವ ಸ್ವಿಚ್‌ಬೋರ್ಡ್ ಸ್ಥಳಾಂತರಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ ಬೇಲೂರು ಮಾ. 25
ಪುರಸಭಾ ಅವೈಜ್ಞಾನಿಕ ನೀತಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕುಡಿಯುವ ನೀರಿನ ಪೂರೈಕೆಗೆ ಅಳವಡಿಸಿರುವ ವಿದ್ಯುತ್ ಸ್ವಿಚ್‌ಬೋರ್ಡ್ ಅಪಾಯಕ್ಕೆ ದಾರಿಯಾಗಿದೆ.
ಪಟ್ಟಣದ ಹೊಳೆಬೀದಿಯ ಹೊಟೇಲ್ ಒಂದರ ಮುಂಭಾಗದ ರಸ್ತೆಯ ಬದಿಯ ನೆಲಮಟ್ಟದಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್ ಅಳವಡಿಸಿದ್ದು, ಇದರಿಂದ ಮಕ್ಕಳು ಹಾಗೂ ಜಾನುವಾರು ಜೀವ ಕಳೆದು ಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ಪ್ರದೇಶದಲ್ಲಿ ಪ್ರತಿದಿನ ನೂರಾರು ಮಕ್ಕಳು ಶಾಲಾ- ಕಾಲೇಜಿಗೆ ತೆರಳುತ್ತಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಪುರಸಭೆಯ ಅಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ಗಮನ ಹರಿಸದೆ ಇರುವುದು ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದೆ.
ಭಾನುವಾರ ಬೆಳಗ್ಗೆ ಸ್ವಿಚ್ ಬೋರ್ಡ್ ಸಮೀಪ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಸ್ವಿಚ್ ಬೋರ್ಡ್‌ಗೆ ಕೈಹಾಕಲು ಮುಂದಾದಾಗ ಸ್ಥಳೀಯರು ಮಕ್ಕಳನ್ನು ಪಾರುಮಾಡಿದರು. ಬಹಳ ದಿನಗಳಿಂದ ನೆಲಮಟ್ಟದಲ್ಲಿರುವ ಈ ಸ್ವಿಚ್ ಬೋರ್ಡ್‌ನ್ನು ಸ್ಥಳೀಯರು ಬೇರೆಡೆ ವರ್ಗಯಿಸುವಂತೆ ಮನವಿ ಮಾಡಿದ್ದರೂ ಗಮನ ಹರಿಸದೆ ಇರುವುದು ವಿಪರ್ಯಾಸವಾಗಿದೆ.
ಕೂಡಲೇ ಅಧಿಕಾರಿಗಳು ಗಮನಹರಿಸಿ ಬೇರೆಡೆ ವರ್ಗಾಯಿಸದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂಬುಂದು ನಾಗರಿಕರ ಅಭಿಪ್ರಾಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.