ಜೇನುನೊಣ ದಾಳಿ: 55 ವಿದ್ಯಾರ್ಥಿಗಳು ಅಸ್ವಸ್ಥ
ಕ.ಪ್ರ.ವಾರ್ತೆ ಸಕಲೇಶಪುರ ಮಾ. 25
ಶಾಲಾ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ನಡೆಸಿದ್ದರಿಂದ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ಬೆ.9.30 ರಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಜೇನುನೊಣಗಳು ಶಾಲೆಯ ಆವರಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರಿಂದ ಬಹುತೇಕ ವಿದ್ಯಾರ್ಥಿಗಳು ಜೇನುನೊಣಗಳಿಂದ ತಪ್ಪಿಸಿಕೊಳ್ಳಲು ಶಾಲೆಯ ಕೊಠಡಿಯ ಬಳಗೆ ಓಡಿದರು.
ಬಿಡದಂತೆ ಬೆನ್ನಟ್ಟಿದ ಜೇನು ನೊಣಗಳು ವಿದ್ಯಾರ್ಥಿಗಳ ತಲೆ, ಮುಖ, ಕೈ, ಕಾಲುಗಳಿಗೆ ಕಚ್ಚಿದವು. ಈ ವೇಳೆಯಲ್ಲಿ ಶಿಕ್ಷಕರು ಹಾಜರಿರದ ಕಾರಣ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಬಡಾವಣೆಯ ಜನರು ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳಾದ ಅಶ್ವಿತ ಹಾಗೂ ನವೀನ್ ಅವರನ್ನು ಹಾಸನಕ್ಕೆ ಕರೆದೊಯ್ಯಲಾಗಿದೆ. ಪುರಸಭೆ ಸದಸ್ಯರಾದ ಪುಷ್ಪ ಹಾಗೂ ಉಮೇಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿದ್ದ ವಿದ್ಯಾರ್ಥಿಗಳ ಚಿಕಿತ್ಸೆಯ ಮೇಲುಸ್ತುವಾರಿ ನೋಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

