ಹಾಸನ

ತಹಸೀಲ್ದಾರ್‌ಗೂ ತಟ್ಟಿದ ಪ್ರತಿಭಟನೆ ಬಿಸಿ

Published On :

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಲು ಆಗಮಿಸಿದ ವೇಳೆ ರೈತ ಮುಖಂಡರು ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಇದರಿಂದ ಸಿಟ್ಟಿಗೆದ್ದ ತಹಶೀಲ್ದಾರ್ ಜಗದೀಶ್, ಸರ್ಕಾರದ ಮಟ್ಟದಲ್ಲಿ ಆಗಬೇಕಾಗಿರುವ ಕಾರ್ಯಗಳಿಗೆ ನಾನು ಭರವಸೆ ನೀಡಲು ಸಾಧ್ಯವಿಲ್ಲ. ನೀವು ಮನವಿ ಅರ್ಪಿಸಿದಲ್ಲಿ ಅದನ್ನು ಸರ್ಕಾರಕ್ಕೆ ಕಳಿಸಲಾಗುವುದು ಎಂದಾಗ ರೈತರು ತಹಶೀಲ್ದಾರ್‌ರೊಡನೆ ವಾಗ್ವಾದಕ್ಕಿಳಿದ ಪರಿಣಾಮ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ರೈತರು ತಹಶೀಲ್ದಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಜಿಲ್ಲಾಧಿಕಾರಿಗಳು ಕೂಡಲೇ ತಹಶೀಲ್ದಾರ್‌ರವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್ ಜಗದೀಶ್, ಸಮಸ್ಯೆ ಗಂಭೀರತೆಯ ಬಗ್ಗೆ ನಾವು ಸರ್ಕಾರಕ್ಕೆ ಹಾಗೂ ಉನ್ನತಾಧಿಕಾರಿಗಳಿಗೆ ವರದಿ ಸಲ್ಲಿಸಬಹುದೇ ವಿನಃ ಯಾವುದೇ ನಿರ್ದಿಷ್ಟ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ರೀತಿಯ ಘಟನೆ ಮನಸ್ಸಿಗೆ ನೋವು ತರಿಸಿದೆ. ತಾವೂ ಕೂಡ ರೈತನ ಮಗನಾಗಿದ್ದು ಅವರ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಅನಗತ್ಯ ಟೀಕೆಗಳನ್ನು ಮಾಡುವುದು ಸರಿಯಲ್ಲ. ರೈತರ ಸಮಸ್ಯೆ ಪರಿಹರಿಸಲು ಯತ್ನಿಸಲಾಗುವುದೆಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.