ಹಾಸನ

ಎಸ್ಸೆಸ್ಸೆಲ್ಸಿ: ಜಿಲ್ಲೆಯಲ್ಲಿ 27,495 ವಿದ್ಯಾರ್ಥಿಗಳು, 106 ಪರೀಕ್ಷಾ ಕೇಂದ್ರ

Published On :

ಕ.ಪ್ರ.ವಾರ್ತೆ ಹಾಸನ ಮಾ. 26
ಜಿಲ್ಲೆಯಲ್ಲಿ ಏಪ್ರಿಲ್ 1ರಿಂದ 10ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 27,495 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಹೊಸದಾಗಿ 12,679 ಗಂಡು, 12,834 ಹೆಣ್ಣು ಮಕ್ಕಳೂ ಸೇರಿದಂತೆ 25,513 ವಿದ್ಯಾರ್ಥಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಲ್ಲದೆ ಪುನರಾವರ್ತಿತವಾಗಿ ಹಾಗೂ ಖಾಸಗಿಯಾಗಿ 1545 ಗಂಡು, 437 ಹೆಣ್ಣು ಮಕ್ಕಳೂ ಸೇರಿದಂತೆ 1982 ಮಕ್ಕಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಹಾಗೂ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಸಿದ್ಧತೆ:  ಜಿಲ್ಲೆಯಲ್ಲಿ 106 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಅವುಗಳಲ್ಲಿ 12 ಸೂಕ್ಷ್ಮ, 4 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಗಳ ತಾಲೂಕುವಾರು ವಿವರ.
ಆಲೂರು ತಾಲೂಕು 6, ಅರಕಲಗೂಡು ತಾಲೂಕಿನ 11 ಪರೀಕ್ಷಾ ಕೆಂದ್ರಗಳಲ್ಲಿ 2 ಸೂಕ್ಷ್ಮ, 2 ಅತೀ ಸೂಕ್ಷ್ಮ, ಅರಸೀಕೆರೆ ತಾಲೂಕಿನ 18 ಪರೀಕ್ಷಾ ಕೇಂದ್ರಗಳಲ್ಲಿ 3 ಸೂಕ್ಷ್ಮ, 2 ಅತೀ ಸೂಕ್ಷ್ಮ, ಬೇಲೂರು ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರ, ಚನ್ನರಾಯಪಟ್ಟಣ ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 3 ಸೂಕ್ಷ್ಮ, ಹಾಸನ ತಾಲೂಕಿನ 27 ಪರೀಕ್ಷಾ ಕೇಂದ್ರಗಳಲ್ಲಿ 4 ಸೂಕ್ಷ್ಮ ಪರೀಕ್ಷಾ ಕೇಂದ್ರ ಎಂದು ಗುರುತಿಸಲಾಗಿದೆ.ಹೊಳೆನರಸೀಪುರ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಇಲಾಖೆ ಉಪನಿರ್ದೇಶಕ ಬಸವರಾಜು ಮಾಹಿತಿ ನೀಡಿದ್ದಾರೆ.
ಜಾಗೃತ ದಳ ರಚನೆ:  ಪರೀಕ್ಷೆ ಸುಸೂತ್ರವಾಗಿ ನಡೆಸಲು 9 ಜಾಗೃತದಳ ರಚಿಸಲಾಗಿದೆ. ಪ್ರತಿ ತಂಡದಲ್ಲಿ 4 ಸದಸ್ಯರಿದ್ದಾರೆ. ಪ್ರತಿ ತಾಲೂಕಿನಲ್ಲಿ ತಹಸೀಲ್ದಾರ್, ಕಾರ್ಯ ನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ.
ಅಂತರ ಜಿಲ್ಲಾಮಟ್ಟದ ಜಾಗೃತ ದಳದ 9 ಸದಸ್ಯರು ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.