ಗ್ರಾಪಂ ಉಪಾಧ್ಯಕ್ಷ- ಸದಸ್ಯರ ಮಾತಿನ ಚಕಮಕಿ
ಕ.ಪ್ರ.ವಾರ್ತೆ ಬಾಣಾವರ ಮಾ 28
ಗ್ರಾಮ ಪಂಚಾಯ್ತಿ 4 ನೇ ವಾರ್ಡ್ನಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ಈ ವಾರ್ಡ್ ಬಗ್ಗೆ ಪಂಚಾಯ್ತಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಬಿ.ಸಿ. ಮಂಜುನಾಥ್ ನೇತೃತ್ವದಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ 5ನೇ ವಾರ್ಡ್ ಗ್ರಾಪಂ ಸದಸ್ಯ ಬಿ.ಡಿ.ಮಲ್ಲಿಕಾರ್ಜುನ್ ಹಾಗೂ ಉಪಾಧ್ಯಕ್ಷ ಬಿ.ಸಿ.ಮಂಜುನಾಥ್ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಈ ವೇಳೆ ಎಸ್ಐ ನರೇಂದ್ರಕುಮಾರ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು. ನಂತರ ತಾಪಂ ಸದಸ್ಯ ಬಿ.ರವಿಶಂಕರ್ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಬಿ.ಎಸ್.ಅಶೋಕ್, ಗ್ರಾಪಂ ಸದಸ್ಯ ಸುರೇಶ್ ಸಾರ್ವಜನಿಕರನ್ನು ಸಮಾಧಾನಪಡಿಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ಗೆ ಮಹಿಳೆಯರು ಮುತ್ತಿಗೆ ಹಾಕಿ ನೀರಿನ ಸಮಸ್ಯೆ ಪರಿಹಾರ ಮಾಡುವಂತೆ ಆಗ್ರಹಿಸಿದರು. ನಂತರ 4ನೇ ವಾರ್ಡ್ ನ ಎಲ್ಲಾ ಬೀದಿಗಳಿಗೂ ಕಾರ್ಯನಿರ್ವಾಹಣಾಧಿಕಾರಿ ಭೇಟಿ ನೀಡಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವುದು ನಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದು 3 ಸಿಸ್ಟಂ ಹಾಗೂ ಒಂದು ಕೊಳವೆ ಬಾವಿಯನ್ನು ತುರ್ತಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಬಾಣಾವರ ಗ್ರಾಪಂ ಎಲ್ಲಾ ವಾರ್ಡ್ಗಳಲ್ಲಿನ ಅಕ್ರಮ ಸಂಪರ್ಕ ಕಡಿತಗೊಳಿಸಿ, ಶಿಥಿಲಗೊಂಡ ಪೈಪ್ಲೈನ್ ದುರಸ್ತಿಗೊಳಿಸಿ ನೀರನ್ನು ಸಮರ್ಪಕವಾಗಿ ಬಿಡುವಂತೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಗೆ ಆಗ್ರಹಿಸಿದರು.
5ನೇ ವಾರ್ಡ್ಗೆ ಭೇಟಿ ನೀಡಿದಾಗ ವಾರ್ಡ್ ಸದಸ್ಯ ಬಿ.ಡಿ.ಮಲ್ಲಿಕಾರ್ಜುನ್ ಹಾಗೂ ಗ್ರಾಪಂ ಉಪಾಧ್ಯಕ್ಷ ಬಿ.ಸಿ.ಮಂಜುನಾಥ್ ನಡುವೆ ಮತ್ತೆ ಮಾತಿನ ಚಕಮಕಿ ನಡೆದು ಕಾರ್ಯನಿರ್ವಾಹಣಾಧಿಕಾರಿಗಳ ಸಮ್ಮುಖದಲ್ಲೆ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು.
ಇದರಿಂದ ಬೇಸತ್ತ ಕಾರ್ಯನಿರ್ವಾಹಣಾಧಿಕಾರಿ ಸ್ಥಳದಿಂದ ಹೊರಟು ಹೋದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

