ಹಾಸನ

ಕಾಮಾಂಧರಿಗೆ ಶಿಕ್ಷೆಯಾಗದಿದ್ದರೆ ದೌರ್ಜನ್ಯ ನಿಲ್ಲದು: ಭವಾನಿ ರೇವಣ್ಣ

Published On :

ಕ.ಪ್ರ.ವಾರ್ತೆ ಹೊಳೆನರಸೀಪುರ ಮಾ.28
ಪ್ರಸ್ತುತ ದಿನಗಳಲ್ಲಿ ಹೆಣ್ಣಿನ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ, ಆಸಿಡ್ ದಾಳಿ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇಂತಹ ಪ್ರಕರಣಗಳಿಗೆ ಕಾರಣರಾದ ಕಾಮಾಂಧರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗದ ಹೊರತು ಹೆಣ್ಣಿನ ಮೇಲಿನ ದೌರ್ಜನ್ಯ ಪ್ರಕರಣಗಳು ನಿಲ್ಲದು ಎಂದು ಭವಾನಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಲಾಗಿದ್ದ ಪಾರಂಪರಿಕ ವೇಷಭೂಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆ ಒಂದಲ್ಲ ಒಂದು ರೀತಿಯಲ್ಲಿ ಪುರುಷನ ಜೀವನದಲ್ಲಿ ತನ್ನ ಪ್ರಾಮುಖ್ಯತೆ ಸಾರಿದ್ದರೂ ಹೆಣ್ಣು ಇಂದಿಗೂ ನಿರಂತರ ಶೋಷಣೆಗೆ ಒಳಗಾಗುತ್ತಲೇ ಇರುವುದು ಶೋಚನೀಯ ಸಂಗತಿಯಾಗಿದೆ ಎಂದರು.
ಮಹಿಳೆ ತಾನು ಅಬಲೆ ಎಂಬ ಭಾವನೆ ಮನಸ್ಸಿನಿಂದ ಕಿತ್ತುಹಾಕಿ ಹೆಚ್ಚು ಹೆಚ್ಚಾಗಿ ಉನ್ನತ ಶಿಕ್ಷಣವನ್ನು ಗಳಿಸುವ ಮೂಲಕ ಸಮಾಜದಲ್ಲಿ ತನ್ನ ಸ್ಥಾನವನ್ನು ಸಾಬೀತುಪಡಿಸುವಲ್ಲಿ ಹಿಂದೆ ಬೀಳದಂತಹ ಮನೋಧೋರಣೆ ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕಾಲೇಜಿನಿಂದ ಹೆಣ್ಣುಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಪಾರಂಪರಿಕ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 40ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರಲ್ಲಿ ಅತ್ಯುತ್ತಮ 5 ವಿದ್ಯಾರ್ಥಿನಿಯರನ್ನು ಭವಾನಿ ರೇವಣ್ಣ ಆಯ್ಕೆ ಮಾಡಿದರು.
ಸಂತ ಫಿಲೋಮಿನಾ ಕಾಲೇಜಿನ ಉಪನ್ಯಾಸಕಿ ಎಂ.ಭಾರತಿ ಮಾತನಾಡಿ, ಇಂದಿನ ಸಮಾಜದಲ್ಲಿ ಸ್ತ್ರೀ ಸ್ವಾತಂತ್ರ್ಯ ಎಂಬುದು ಮರೀಚಿಕೆಯಾಗಿದ್ದು, ಒಂದು ಹಂತದಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರುವಾಗುತ್ತಿರುವುದು ವಿಷಾದನೀಯ ಎಂದರು.  ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಇರ್ಷಾದ್ ಮಾತನಾಡಿದರು. ಪ್ರಾಧ್ಯಾಪಕಿ ಶಾಂತ, ಪೂರ್ಣಿಮ ಹಾಗೂ ನಯನತಾರಾಮಣಿ ಅವರ ಕ್ರಿಯಾಶೀಲತೆಯನ್ನು ಭವಾನಿರೇವಣ್ಣ ಪ್ರಶಂಸಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.