ಹೋಬಳಿಯಲ್ಲಿ ಬಿಗಡಾಯಿಸಿದ ಸಮಸ್ಯೆ
ಕ.ಪ್ರ.ವಾರ್ತೆ ಜಾವಗಲ್ ಮಾ. 28
ಹಿಂಗಾರು ಮಳೆಯ ಅಭಾವ ಮತ್ತು ನೀರು ಸಂಗ್ರಹಣೆ ವ್ಯವಸ್ಥೆ ಕೊರತೆಯಿಂದ ಹೋಬಳಿಯ ನೇರ್ಲಿಗೆ, ಕೋಳಗುಂದ, ಅರಕೆರೆ, ಬಂದೂರು ಹಂದ್ರಾಳು ಉಂಡಿಗನಾಳು ಕಲ್ಯಾಡಿ ಕರಗುಂದ ಕೆರೆ ಕಟ್ಟೆಗಳು ಬತ್ತಿ ನೀರಿನ ಕೊರತೆ ತೀವ್ರವಾಗಿ ಬಿಗಡಾಯಿಸಿವೆ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯದಿಂದ ಜಾನುವಾರುಗಳಿಗೆ ಮೇವಿನ ಅಭಾವ ಮುಂತಾದ ಹಲವು ಸಮಸ್ಯೆಗಳನ್ನು ರೈತರು ಅನುಭವಿಸುವಂತಾಗಿದೆ. ಬೇಸಿಗೆಯಲ್ಲಿ ಜನರಿಗೆ ಆಸರೆಯಾಗ ಬೇಕಾಗಿದ್ದ ಕೆರೆಗಳು ಭಣಗುಡುತ್ತಿವೆ.
ಕಳೆದ 5 ವರ್ಷಗಳಿಂದ ಮಳೆ ಇಲ್ಲದೆ ಕೆರೆಗಳೆಲ್ಲಾ ಬಿರುಕು ಬಿಟ್ಟಿವೆ. ಬರಗಾಲದ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ.
ಹೊಲ ತೋಟಗಳಲ್ಲಿ 300-400 ಅಡಿ ಕೊಳವೆ ಬಾವಿ ಕೊರೆದರು ನೀರು ಲಭ್ಯವಾಗುತ್ತಿಲ್ಲಾ. ಗ್ರಾಮೀಣ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಬರಗಾಲ ಬೆನ್ನು ಬಿಡದೆ ಕಾಡುತ್ತಿದೆ. ಮತ್ತೊಂದೆಡೆ ಮಳೆಯ ಅಭಾವದಿಂದ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಈ ಹೋಬಳಿಯ ಕೆರೆಗಳಿಗೆ ಶಾಶ್ವತ ನೀರು ಕಲ್ಪಿಸ ಬೇಕೆಂದು ರೈತರು ಒತ್ತಾಯಿಸಿದ್ದಾರೆ.
ವಿದ್ಯುತ್ ಸಮಸ್ಯೆ: ಇತ್ತೀಚಿನ ದಿನಗಳಲ್ಲಿ ದಿನಕ್ಕೆ 7 ಗಂಟೆಗಳ ಕಾಲ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ರಾತ್ರಿಯ ವೇಳೆ 2 ಗಂಟೆಗೂ ಹೆಚ್ಚು ಸಮಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈಗ ಪರೀಕ್ಷಾ ಸಮಯವಾಗಿರುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಮತ್ತು ಪಂಪ್ ಸೆಟ್ ಹೊಂದಿರುವ ರೈತರು ಜೀವನೋಪಾಯಕ್ಕೆ ತರಕಾರಿ ಬೆಳೆ ಮಾಡಿದ್ದು ಕೊಳವೆ ಬಾವಿಗಳಿಂದ ನೀರನ್ನು ಹಾಯಿಸಿ ಅವುಗಳನ್ನು ಉಳಿಸಿ ಕೊಳ್ಳಲು ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಸಾಧ್ಯವಾಗದೆ ನಿತ್ರಾಣಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

